ಬೆಂಗಳೂರು: ಕೊರೊನಾ ಸೋಕಿತರ ಪ್ರಾಣ ರಕ್ಷಿಸಲು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರು ವಿಕಾಸಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಬುಧವಾರ ಧರಣಿ ನಡೆಸುತ್ತಿದ್ದಾರೆ.

ಗಂಭೀರಾವಸ್ಥೆಯಲ್ಲಿರುವ ರೋಗಿಗಳಿಗೆ ಹಾಸಿಗೆ, ಆಮ್ಲಜನಕ, ವೆಂಟಿಲೇಟರ್ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ ವಹಿಸಿದೆ. ಲಾಕ್ಡೌನ್ನಿಂದ ಸಂಕಷ್ಟ ಎದುರಿಸುತ್ತಿರುವ ದುರ್ಬಲ ವರ್ಗದವರಿಗೆ, ಬಡವರಿಗಾಗಿ ರಾಜ್ಯ– ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಿಸಿಲ್ಲ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.

ಧರಣಿಯ ನೇತೃತ್ವವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಹಿಸಿದ್ದಾರೆ.

ಶಾಸಕರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ,ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತಿತರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.