ಬೆಂಗಳೂರು: ಕಾಂಗ್ರೆಸ್ ನಾಯಕರು ಕಿರುಕುಳ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಲವು ಬಾರಿ ಜೆಡಿಎಸ್ ಪಕ್ಷದ ವರಿಷ್ಠ ದೇವೇಗೌಡರ ಎದುರು ಕಣ್ಣೀರು ಹಾಕಿದ್ದರು ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯಶರವಣ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರ ಅತಿರೇಕದ ವರ್ತನೆಗಳು ಕುಮಾರಸ್ವಾಮಿಗೆ ಬೇಸರ ತಂದಿತ್ತು. ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿಗೆ ಏನು ಹಿಂಸೆ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನ ಮಾಡಿರುವ ಬಗ್ಗೆ ದೇವೇಗೌಡರ ಬಳಿ ಹೇಳಿಕೊಂಡಿದ್ದರು. ನಾವು ಬಲವಂತ ಮಾಡಿ ಆತುರದ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು.

ಇದನ್ನೂ ಓದಿ:ಇನ್ನೊಬ್ಬರ ಮೇಲೆ ಗೂಬೆಕೂರಿಸಿ ಅಳುವುದೇ ದೇವೇಗೌಡರ ಕೆಲಸ: ಸಿದ್ದರಾಮಯ್ಯ

ಸಿದ್ದರಾಮಯ್ಯ ಸೇರಿ ಹಲವಾರು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸಿಎಂ ಸ್ಥಾನದಲ್ಲಿರುವುದು ಸಹಿಸಿಕೊಂಡು ಹೋಗಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಅವರನ್ನು ಇಳಿಸಲೇಬೇಕೆಂದು ತೀರ್ಮಾನ ಕೈಗೊಂಡಿದ್ದರು. ಈಗ ಆ ಕೆಲಸ ಮಾಡಿದ್ದಾರೆ. ಮೈತ್ರಿ ಸರ್ಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದನ್ನು ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ಇದನ್ನೂ ಓದಿ:ಮೈತ್ರಿ ಸರ್ಕಾರ ಬೀಳಿಸಲು ಟೈಮ್ ಬಾಂಬ್ ಫಿಕ್ಸ್ ಮಾಡಿದ್ದ ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.