ನವದೆಹಲಿ: ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕದ ಕಾಂಗ್ರೆಸ್ ಸಂಸದರು ಏಮ್ಸ್ ಹೋರಾಟ ಸಮಿತಿಯ ಸಹಭಾಗಿತ್ವದಲ್ಲಿ ಜಂತರ್ ಮಂತರ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ರಾಯಚೂರು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ. ಈ ಜಿಲ್ಲೆಯನ್ನು ಅಭಿವೃದ್ಧಿ ಆಕಾಂಕ್ಷಿ ಜಿಲ್ಲೆಯೆಂದು ಕೇಂದ್ರ ಗುರುತಿಸಿದೆ. ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಬೇಕು ಎಂಬ ಬೇಡಿಕೆ ಬಹುಕಾಲದಿಂದ ಇದೆ. ಈ ಸಂಬಂಧ ಕರ್ನಾಟಕ ಸರ್ಕಾರ ಹಲವು ಸಲ ಮನವಿ ಸಲ್ಲಿಸಿದೆ. ಆದರೆ, ಕೇಂದ್ರ ಸ್ಪಂದಿಸಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ ಅಧಿವೇಶನ ಮುಗಿಯುವ ಮೊದಲು ಜಿಲ್ಲೆಗೆ ಏಮ್ಸ್ ಮಂಜೂರು ಮಾಡಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.

ಕಾಂಗ್ರೆಸ್ ಸಂಸದರಾದ ಜಿ.ಕುಮಾರ್ ನಾಯಕ, ಡಾ. ಪ್ರಭಾ ಮಲ್ಲಿಕಾರ್ಜುನ, ರಾಧಾಕೃಷ್ಣ, ರಾಜಶೇಖರ್ ಹಿಟ್ನಾಳ್, ಏಮ್ಸ್ ಹೋರಾಟ ಸಮಿತಿಯ ಸಂಯೋಜಕ ಬಸವರಾಜ ಕಳಸ ಮತ್ತಿತರರು ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.