ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಜೆಟ್‌ನಲ್ಲಿ ರಾಜ್ಯಕ್ಕೆ ತಾರತಮ್ಯ: ಯುವ ಕಾಂಗ್ರೆಸ್‌ ಪ್ರತಿಭಟನೆ

Published 24 ಜುಲೈ 2024, 15:47 IST
Last Updated 24 ಜುಲೈ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ತಾರತಮ್ಯ ಮಾಡಲಾಗಿದೆ. ರಾಜ್ಯದ ಬಿಜೆಪಿಯ ಸಂಸದರು ನ್ಯಾಯ ದೊರಕಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್‌.ಎಸ್‌. ಮಂಜುನಾಥ ಗೌಡ ವಾಗ್ದಾಳಿ ನಡೆಸಿದರು.

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಯುವ ಕಾಂಗ್ರೆಸ್‌ ವತಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ರಾಜ್ಯಕ್ಕೆ ಉಪಯೋಗ ಆಗುವಂತಹ ಒಂದೇ ಒಂದು ಯೋಜನೆ ಬಜೆಟ್‌ನಲ್ಲಿ ಇಲ್ಲ. ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದ ಮೊದಲ ಬಜೆಟ್ ಇದು’ ಎಂದೂ ಹೇಳಿದರು.

‘ಕರ್ನಾಟಕಕ್ಕೆ ಮೋದಿ ಚೊಂಬು’ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT