ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ.

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.

ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವಿಟರ್ನಲ್ಲಿ ವಿಡಿಯೊ ಹಂಚಿಕೊಂಡಿರುವ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ‘ಶಾಂತಿ ಮತ್ತು ಸಮೃದ್ಧಿಯ ಹೊಸ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ’ ಎಂದು ಕರೆ ನೀಡಿದ್ದಾರೆ.

‘40 ಪರ್ಸೆಂಟ್ ಕಮಿಷನ್, ವರ್ಗಾವಣೆ ದಂಧೆ, ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿರುವ ಬಿಜೆಪಿ ಕರ್ನಾಟಕವನ್ನು ಲೂಟಿ ಮಾಡುತ್ತಿದೆ. ಬಿಜೆಪಿ ಸರ್ಕಾರವನ್ನು ಕಿತ್ತೆಸೆಯುವ ಮೂಲಕ ಬ್ರಾಂಡ್ ಕರ್ನಾಟಕವನ್ನು ಮರು ನಿರ್ಮಾಣ ಮಾಡುವುದರ ಜತೆಗೆ ಕನ್ನಡಿಗರ ಹೆಮ್ಮೆಯನ್ನು ಮರುಸ್ಥಾಪಿಸೋಣ. ಆರುವರೆ ಕೋಟಿ ಕನ್ನಡಿಗರ ಆರ್ಶಿವಾದದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ’ ಎಂದು ಸುರ್ಜೇವಾಲ ಹೇಳಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ.

ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.

ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.

ವಿಶೇಷವಾಗಿ ಯುವ ಸಿಬ್ಬಂದಿ ಮಾತ್ರ ನಿರ್ವಹಿಸುವ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯೇ ನಿರ್ವಹಿಸು 1320 ಮತಗಟ್ಟೆಗಳು ಇರುತ್ತವೆ. ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಇವನ್ನೂ ಓದಿ...

* ಮೇ 10ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

* ಕಾಂಗ್ರೆಸ್ನ 23 ವರ್ಷದ ತ್ರಿವೇಣಿ ಬಳ್ಳಾರಿ ಮೇಯರ್: ಜಾನಕಮ್ಮ ಉಪ ಮೇಯರ್

* ಚುನಾವಣೆ ದಿನಾಂಕ ಪ್ರಕಟ: ರಾಜ್ಯದಲ್ಲಿ ಪ್ರಗತಿಪರ ಅಲೆ ಶುರುವಾಗಿದೆ ಎಂದ ಡಿಕೆಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.