ಗದಗ: ‘ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಿದ್ದು, ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲಾಗುವುದು’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ನಡೆದ ಪದವಿ ಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

‘2015ರಿಂದ 2023ರವರೆಗೆ ರಾಜ್ಯದ ವಿವಿಧ ಅನುದಾನಿತ ಶಿಕ್ಷಣ ಸಂಸ್ಥೆಗಳಿಂದ ನಿವೃತ್ತಿಯಾಗಿರುವ ಎಂಟು ಸಾವಿರ ಖಾಲಿ ಹುದ್ದೆಗಳ ಭರ್ತಿ ಆಗಬೇಕಿದೆ. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗಿದ್ದು, ಕಡೆಪಕ್ಷ 2020ರವರೆಗೆ ನಿವೃತ್ತಿ ಆಗಿರುವ ಹುದ್ದೆಗಳ ಭರ್ತಿಗೆ ಅನುಮತಿ ಪಡೆಯುವ ವಿಶ್ವಾಸವಿದೆ’ ಎಂದು ತಿಳಿಸಿದರು.

‘ಮುಂದಿನ ವರ್ಷದಿಂದ ಕನಿಷ್ಠ 500ರಿಂದ 600 ಶಾಲೆಗಳಲ್ಲಿ ಪಬ್ಲಿಕ್ ಶಾಲಾ ವ್ಯವಸ್ಥೆ ಜಾರಿ ಆಗಲಿದೆ. ₹2,800 ಕೋಟಿ ಅನುದಾನ ಒದಗಿಸುವ ಗುರಿ ಹೊಂದಲಾಗಿದೆ. ಕೈಗಾರಿಕೆ ಸೇರಿದಂತೆ ಇತರೆ ಸಂಸ್ಥೆಗಳ ಸಿಎಸ್ಆರ್ ಅನುದಾನವನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಸರ್ಕಾರ ತೀರ್ಮಾನಿಸಿದೆ’ ಎಂದು ತಿಳಿಸಿದರು.

‘ಶಾಲೆಗಳ ಮೇಲುಸ್ತುವಾರಿಗೆ ಎಸ್ಡಿಎಂಸಿ ಇರುವಂತೆ ಪದವಿ ಪೂರ್ವ ಹಂತದ ಮೇಲುಸ್ತುವಾರಿಗೆ ಸಮಿತಿ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಆಡಳಿತ ನಿರ್ವಹಣೆಯನ್ನು ಮಾತ್ರ ಸಿಇಒ, ಉಪ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ’ ಎಂದು ತಿಳಿಸಿದರು.

‘ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಡಯಟ್ಗಳನ್ನು ಸಂಪೂರ್ಣವಾಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.