ಬೆಂಗಳೂರು: ‘ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಗಳನ್ನು ಒಂದುಗೂಡಿಸಿ, ನೇಕಾರರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನಪರಿಷತ್ನಲ್ಲಿ ಮಂಗಳವಾರ ಅರ್ಧ ಗಂಟೆ ಚರ್ಚೆಯಲ್ಲಿ ಬಿಜೆಪಿಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕೈಮಗ್ಗಗಳಿಗೆ ವಿದ್ಯುತ್ ನೀಡುವುದಲ್ಲದೆ, ಪವರ್ಲೂಂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನದ ವ್ಯವಸ್ಥೆಯನ್ನು ಕಲ್ಪಿಸಿ, ನೇಕಾರರು ಬದುಕು ಕಟ್ಟಿಕೊಳ್ಳಲು ಅಗತ್ಯ ಇರುವ ಎಲ್ಲ ಸೌಕರ್ಯಗಳನ್ನು ಹಂತಹಂತವಾಗಿ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದರು.

‘ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕುಗಳ ಮೂಲಕ ನೇಕಾರರಿಗೆ ಶೂನ್ಯಬಡ್ಡಿದರ ಮತ್ತು ರಿಯಾಯಿತಿ ಬಡ್ಡಿದರದಲ್ಲಿ ಒಟ್ಟ ಸುಮಾರು ₹40 ಕೋಟಿ ವಿತರಣೆ ಮಾಡಲಾಗಿದೆ. ನೇಕಾರರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದ್ದು, ಉದ್ಯೋಗದಿಂದ ವಿಮುಖರಾಗುವುದನ್ನು ತಡೆಗಟ್ಟಲು ಸರ್ಕಾರ ಅಗತ್ಯ ನೆರವು ನೀಡಲಿದೆ’ ಎಂದು ಹೇಳಿದರು.

‘ಇಳಕಲ್ ಸೀರೆ ಸೇರಿದಂತೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಸೀರೆಗಳಿಗೂ ಸರ್ಕಾರದ ಶೋರೂಂಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಕಾಂಗ್ರೆಸ್ನ ಉಮಾಶ್ರೀ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.