ನವದೆಹಲಿ: ಆಟೊ ಬಿಡಿಭಾಗಗಳ ಮೇಲೆ ಇತರೆ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಆಟೊ ಉದ್ಯಮಕ್ಕೆ ಸಲಹೆ ನೀಡಿದ ಕೇಂದ್ರ ಭಾರೀ ಕೈಗಾರಿಕಾ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ‘ಈ ನಿಟ್ಟಿನಲ್ಲಿ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಬೇಕು’ ಎಂದು ಕರೆ ನೀಡಿದರು.

ನವದೆಹಲಿಯಲ್ಲಿ ಎಸಿಎಂಎ (ದಿ ಆಟೊಮೋಟಿವ್ ಕಾಂಪೊನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ) 64ನೇ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಆಟೊ ಉದ್ಯಮವು ಬಿಡಿಭಾಗಗಳನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲೇಬೇಕು. ದೇಶದಲ್ಲಿ ವಿದ್ಯುತ್ ಚಾಲಿತ ಹಾಗೂ ಹೈಬ್ರಿಡ್ ವಾಹನಗಳ ತಯಾರಿಕೆ ಮತ್ತು ಬಳಕೆಗೆ ಉತ್ತೇಜನ ನೀಡುವ ‘ಫೇಮ್ 3’ ಯೋಜನೆ ಜಾರಿಗೆ ಬರುವ ತನಕ ಎಲೆಕ್ಟ್ರಿಕ್ ವಾಹನ ಉತ್ತೇಜನ ಯೋಜನೆಯನ್ನು (ಇಪಿಎಂಎಸ್) ಮುಂದುವರಿಸಲಾಗುವುದು ಎಂದರು. ‘ಫೇಮ್ 3 ಯೋಜನೆ 2 ತಿಂಗಳಲ್ಲಿ ಜಾರಿಗೆ ಬರಲಿದೆ’ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯಕ್ಕೆ ಆಟೊ ಬಿಡಿಭಾಗ ತಯಾರಿಕಾ ಘಟಕಗಳು ಜಿಡಿಪಿಗೆ ಶೇ 2.7ರಷ್ಟು ಕೊಡುಗೆ ನೀಡುತ್ತಿವೆ ಹಾಗೂ 50 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿವೆ ಎಂದರು.

ಈ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ಉತ್ಪಾದನಾ ಸಂಪರ್ಕ ಉಪಕ್ರಮಗಳನ್ನು ಕೈಗೊಂಡಿದೆ. ಈ ಮೂಲಕ ₹74,850 ಕೋಟಿ ಹೂಡಿಕೆಯನ್ನು ಉತ್ತೇಜಿಸಲಾಗಿದೆ. ಈ ಪೈಕಿ ₹17,836 ಕೋಟಿ ಮೊತ್ತ 2024ರ ಮಾರ್ಚ್ ಹೊತ್ತಿಗೆ ಹೂಡಿಕೆ ಆಗಿದೆ. ಇದರ ಪರಿಣಾಮವಾಗಿ 30,500 ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. ಇದು ಉದ್ಯಮಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ ಎಂದು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.