ಬೆಂಗಳೂರು: ಸಹಕಾರ ಸಪ್ತಾಹವನ್ನು ನವೆಂಬರ್ 14 ರಿಂದ 20 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸರ್ಕಾರದ ಹಣವನ್ನು ಬಳಕೆ ಮಾಡುತ್ತಿಲ್ಲ. ಸಹಕಾರಿಗಳೇ ವೆಚ್ಚವನ್ನು ಭರಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಸಹಕಾರ ಸಪ್ತಾಹದ ಕುರಿತು ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಗಿದೆ. ಸಹಕಾರ ಸಪ್ತಾಹದಲ್ಲಿ ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಸಹಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಹಕಾರ ಸಪ್ತಾಹವನ್ನು ಎಲ್ಲ ಜಿಲ್ಲೆಗಳಲ್ಲೂ ಆಚರಿಸಲಾಗುವುದು. ಕಾರ್ಯಕ್ರಮಗಳು ಪಕ್ಷಾತೀತವಾಗಿ ನಡೆಯುತ್ತವೆ. ಸಹಕಾರಿ ಕ್ಷೇತ್ರದಲ್ಲಿ ದುಡಿದವರಿಗಾಗಿ ‘ಸಹಕಾರ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು.

ಸಹಕಾರ ಬ್ಯಾಂಕ್ಗಳ ಆಗುಹೋಗುಗಳ ಮೇಲೆ ರಾಜ್ಯ ಸರ್ಕಾರದ ನಿಯಂತ್ರಣವಿರುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ಬರುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.