ಕಲಬುರ್ಗಿ: ‘ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಪ್ರಕಟಿಸಿದರು.

ನಗರದ ಡಿಎಆರ್ ಮೈದಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೋಳ, ತೊಗರಿ, ರಾಗಿ ನೀಡ ಬೇಕು ಎಂಬುದು ಬಹಳ ದಿನಗಳ ಬೇಡಿಕೆ ಯಾಗಿತ್ತು. ಅದನ್ನು ಈಗ ಈಡೇರಿಸ ಲಾಗುತ್ತಿದೆ. ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಿ ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ 4.46 ಕೋಟಿ ಜನರಿಗೆ ಪಡಿತರ ಚೀಟಿಗಳನ್ನು ವಿತರಿಸಲಾ ಗಿದ್ದು, 3 ಲಕ್ಷ ಚೀಟಿಗಳನ್ನು ಹೊಸದಾಗಿ ವಿತರಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.