ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 39,510 ಹೊಸ ಪ್ರಕರಣಗಳು ದೃಢಪಟ್ಟಿದ್ದು, 480 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 20.13 ಲಕ್ಷಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 20 ಸಾವಿರದ ಗಡಿ (19,852) ಸಮೀಪಿಸಿದೆ.

ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ ನಡೆಸಲಾದ ಕೋವಿಡ್ ಪರೀಕ್ಷೆಗಳ ಸಂಖ್ಯೆ 1.16 ಲಕ್ಷಕ್ಕೆ ಇಳಿಕೆಯಾಗಿದೆ. ಇದೇ ವೇಳೆ ಸೋಂಕು ದೃಢ ಪ್ರಮಾಣ ಶೇ 33.99ಕ್ಕೆ ಏರಿಕೆಯಾಗಿದೆ.

ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಅಧಿಕ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಕಳೆದ ತಿಂಗಳ ಅಂತ್ಯಕ್ಕೆ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ದಿನವೊಂದಕ್ಕೆ 1.90 ಲಕ್ಷದವರೆಗೂ ಏರಿಕೆ ಮಾಡಲಾಗಿತ್ತು. ಇದರಿಂದಾಗಿ 50 ಸಾವಿರಕ್ಕೂ ಅಧಿಕ ಪ್ರಕರಣಗಳು 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟಿದ್ದವು. ಆದರೆ, ಕಳೆದ ಒಂದು ವಾರದಿಂದ ಪರೀಕ್ಷೆಗಳ ಸಂಖ್ಯೆ ಇಳಿಮುಖ ಕಂಡಿದೆ.

ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 39,510 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 20.13 ಲಕ್ಷಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಸದ್ಯ 5.87 ಲಕ್ಷ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರಲ್ಲಿ 22,584 ಮಂದಿ ಚೇತರಿಸಿಕೊಂಡಿದ್ದಾರೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 259 ಮಂದಿ ಸೇರಿದಂತೆ ರಾಜ್ಯದಲ್ಲಿ 480 ಮಂದಿ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ 28 ಮಂದಿ, ಉತ್ತರ ಕನ್ನಡದಲ್ಲಿ 18 ಮಂದಿ, ತುಮಕೂರು ಹಾಗೂ ಹಾಸನದಲ್ಲಿ ತಲಾ 16 ಮಂದಿ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ತಲಾ 12 ಮಂದಿ, ಶಿವಮೊಗ್ಗದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಮರಣ ಹೊಂದಿದವರಲ್ಲಿ ಬಹುತೇಕರು ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 20 ಸಾವಿರದ ಗಡಿ (19,852) ಸಮೀಪಿಸಿದೆ.

ಬೆಂಗಳೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ 15,879ಕ್ಕೆ ಇಳಿಕೆಯಾಗಿದೆ. ತುಮಕೂರು (2,496), ಮೈಸೂರು (2,170), ಬಳ್ಳಾರಿ (1,558), ಮಂಡ್ಯ (1,354), ಶಿವಮೊಗ್ಗ (1,108), ಉತ್ತರ ಕನ್ನಡ (1,084), ಉಡುಪಿ (1,083) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.