ಬೆಂಗಳೂರು:ಬಸ್ಗಳೊಳಗೆ ಅಂತರ ಕಾಯ್ದುಕೊಂಡು ಪ್ರಯಾಣ ಮಾಡುವುದು ಕಾರ್ಯಸಾಧುವಲ್ಲ. ಆದ್ದರಿಂದ ಪೂರ್ಣ ಪ್ರಮಾಣದಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೇಂದ್ರ ರಸ್ತೆ ಸಾರಿಗೆ ಸಚಿನ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

ಅಂತರ ಕಾಪಾಡಿಕೊಂಡು ಬಸ್ಗಳನ್ನು ಕಾರ್ಯಾಚರಣೆಗೆ ಇಳಿಸಬೇಕಾದರೆ ಸೀಟುಗಳ ಸಂಖ್ಯೆ ಕಡಿಮೆ ಮಾಡಬೇಕು. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರುತ್ತಾರೆ. ನಮ್ಮ ಬಳಿ ಹೆಚ್ಚುವರಿ ಬಸ್ಸುಗಳೂ ಇಲ್ಲ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಬಸ್ಸುಗಳ ಮೇಲೆ ನಿರ್ಬಂಧ ಹೇರುವುದರಿಂದ ಟ್ಯಾಕ್ಸಿ, ಕ್ಯಾಬ್, ಆಟೋ ಇತ್ಯಾದಿಗಳನ್ನು ಪ್ರಯಾಣಿಕರು ನೆಚ್ಚಿಕೊಳ್ಳುತ್ತಾರೆ. ರಸ್ತೆಗಳಲ್ಲಿ ವಾಹನ ಸಂದಣಿ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.

ಎಸಿ ಬಸ್ಸುಗಳಿಗೆ ಅವಕಾಶ ನೀಡುವುದು ಬೇಡ. ವಾಹನಗಳಲ್ಲಿ ಚಾಲಕ ಮತ್ತು ಕಂಡಕ್ಟರ್ಗಳು ಮಾಸ್ಕ್ ಹಾಕಿಕೊಂಡೇ ಬಸ್ ಚಲಾಯಿಸುತ್ತಾರೆ. ಪ್ರಯಾಣಿಕರೂ ಮಾಸ್ಕ್ ಹಾಕಿಕೊಂಡು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ ಸೋಂಕು ಇದ್ದವರಿಗೆ ಬಸ್ಸು ಹತ್ತಲು ಅವಕಾಶ ನೀಡುವುದಿಲ್ಲ ಎಂದು ಸವದಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.