ಬೆಂಗಳೂರು: ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಹೋಗುವ ವೇಳೆ ಮೆರವಣಿಗೆ ನಡೆಸಿ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಪಾದರಾಯನಪುರ ವಾರ್ಡ್ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರನ್ನು ಪೊಲೀಸರು ಬಂಧಿಸಿದ್ದು, ಅವರ ಬೆನ್ಜ್ ಕಾರನ್ನೂ ಜಪ್ತಿ ಮಾಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಿಂದ ಪಾದರಾಯನಪುರದ ಮನೆಯವರೆಗೂ ಭಾನುವಾರ ನಡೆದ ಮೆರವಣಿಗೆಯಲ್ಲಿ ಪರಸ್ಪರ ಅಂತರವೂ ಇರಲಿಲ್ಲ. ಹಲವರು ಮಾಸ್ಕ್ ಸಹ ಧರಿಸಿರಲಿಲ್ಲ. ಹೀಗಾಗಿ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಇಮ್ರಾನ್ ಕಾರು ಹಾಗೂ ಅವರ ಬೆಂಬಲಿಗರ 16 ಬೈಕ್‌ಗಳನ್ನೂ ಜಪ್ತಿ ಮಾಡಲಾಗಿದೆ.

‘ಪಾದರಾಯನಪುರದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂಥ ಸಂದರ್ಭದಲ್ಲೇ ಅನುಮತಿ ಇಲ್ಲದೆ ಮೆರವಣಿಗೆ ಮಾಡಲಾಗಿದೆ. ಅಕ್ರಮವಾಗಿ ಗುಂಪು ಸೇರಿದ್ದ, ಸಾಂಕ್ರಾಮಿಕ ರೋಗ ಹರಡಲು ಯತ್ನಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿದಡಿ ಇಮ್ರಾನ್ ಪಾಷಾ ಸೇರಿ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರೆಲ್ಲರನ್ನೂ ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೊತ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.