ಬೆಳಗಾವಿ: ಶಾಲಾ ಮಕ್ಕಳ ಸಮವಸ್ತ್ರ ವಿತರಣೆಗೆ ಕೇಂದ್ರ ಬಿಡುಗಡೆ ಮಾಡಿದ್ದ ಮೊದಲ ಕಂತಿನ ₹266 ಕೋಟಿಗೆ ಬಳಕೆ ಪ್ರಮಾಣಪತ್ರ ನೀಡದ್ದರಿಂದ ಎರಡನೇ ಕಂತಿನ ಹಣವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.

ಪ್ರತಿ ವಿದ್ಯಾರ್ಥಿಗೆ ₹ 300 ವಿತರಿಸಬೇಕು ಎಂದಿದ್ದರೂ, 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ₹ 200 ಹಾಗೂ 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ₹ 300 ನಿಗದಿ ಮಾಡಲಾಗಿದೆ. ₹ 100 ಕಡಿತಗೊಳಿಸುವ ಮೂಲಕ ಭ್ರಷ್ಟಾಚಾರ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರದ ಆದೇಶದನ್ವಯ ಟೆಂಡರ್ ಕರೆಯದೇ ಆಯಾ ಶಾಲಾ ಎಸ್ಡಿಎಂಸಿ ಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಬೇಕು ಎಂದು ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರು ತಿಳಿಸಿದ ನಂತರವೂ ಟೆಂಡರ್ ಕರೆದಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.