ಬೆಂಗಳೂರು:ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು, ತಜ್ಞರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಸೇವಾ ಸಿಬ್ಬಂದಿಗೆ ರಾಜ್ಯ ಸರ್ಕಾರವು ಕೋವಿಡ್ ವಿಶೇಷ ಹೆಚ್ಚುವರಿ ಭತ್ಯೆ ನೀಡಲಿದೆ. ಮುಂದಿನ 6 ತಿಂಗಳು ಅವಧಿಗೆ ಮಾತ್ರ ಈ ಹೆಚ್ಚುವರಿ ಭತ್ಯೆ ನೀಡಲಾಗುತ್ತದೆ.

ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯನಿರ್ವಹಿಸಲು 14,252 ಆರೋಗ್ಯ ಸೇವಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಸಿಬ್ಬಂದಿ ಸಂಖ್ಯೆ ಕಡಿಮೆ ಬಿದ್ದರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮತಿಯೊಂದಿಗೆ ಜಿಲ್ಲಾಮಟ್ಟದ ಆಯ್ಕೆಸಮಿತಿಯು ತಾತ್ಕಾಲಿಕವಾಗಿ ಈ ಹುದ್ದೆಗಳನ್ನುತುಂಬಿಕೊಳ್ಳಬಹುದಾಗಿದೆ.

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸೇವಾ ಸಿಬ್ಬಂದಿಯು ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ, ವೇತನ ಹೆಚ್ಚಿಸುವ ಬದಲಿಗೆ,ಕೋವಿಡ್ ವಿಶೇಷ ಭತ್ಯೆ ನೀಡಲು ಸರ್ಕಾರ ಮುಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.