ಬೆಂಗಳೂರು: ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿ ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರಿಗೆ ರಾಜ್ಯ ಸರ್ಕಾರವು ₹50 ಲಕ್ಷ ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, 'ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ ₹50 ಲಕ್ಷ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ' ಎಂದಿದ್ದಾರೆ.

'145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

'ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ' ಎಂದು ಎಚ್‌ಡಿಕೆ ಟ್ವೀಟಿಸಿದ್ದಾರೆ.

'ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ' ಎಂದು ಜೆಡಿಎಸ್ ನಾಯಕ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.