ಬೆಂಗಳೂರು: ಜಪಾನ್ ಮತ್ತು ಥಾಯ್ಲೆಂಡ್ ದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ದೂರವಾಣಿ ಮೂಲಕ ನಿಗಾ (ಟೆಲಿ ಮಾನಿಟರಿಂಗ್) ಇರಿಸುವಂತೆ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಶನಿವಾರ ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಸುತ್ತೋಲೆ ಹೊರಡಿಸಿರುವ ಅವರು, ‘ಈ ಎರಡೂ ರಾಷ್ಟ್ರಗಳಿಂದ ಬಂದ ಪ್ರಯಾಣಿಕರಲ್ಲಿ ನಿಗಾ ಅವಧಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾ ಮಟ್ಟದ ತಂಡವು ಆರ್ಟಿ–ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ನಡೆಸಬೇಕು ಮತ್ತು ಚಿಕಿತ್ಸೆ ನೀಡಬೇಕು. ಕೋವಿಡ್ ದೃಢಪಟ್ಟವರ ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನೆಯ ವಿಶ್ಲೇಷಣೆಗೆ ಕಳುಹಿಸಬೇಕು’ ಎಂದು ಸೂಚಿಸಲಾಗಿದೆ.

ದಕ್ಷಿಣ ಕೊರಿಯಾ, ಜಪಾನ್, ಥಾಯ್ಲೆಂಡ್, ವಿಯೆಟ್ನಾಂ, ನ್ಯೂಜಿಲೆಂಡ್, ರಷ್ಯಾ ಮತ್ತು ಚೀನಾದಿಂದ ಬೆಂಗಳೂರು ಹಾಗೂ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವವರಲ್ಲಿ ಶೇಕಡ 2ರಷ್ಟು ಮಂದಿಗೆ ಕೋವಿಡ್ ಪರೀಕ್ಷೆ ನಡೆಸುವಂತೆಯೂ ಸೂಚನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.