ಉಳ್ಳಾಲ: ಗೋ ಮಾಂಸದ ಮೂರು ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ತೊಕ್ಕೊಟ್ಟು ಒಳಪೇಟೆಯ ರೈಲ್ವೆ ಹಳಿಯ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಮಾರುಕಟ್ಟೆಯ ನವೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಈ ಅಂಗಡಿಗಳನ್ನು ಸ್ಥಳಾಂತರ ಮಾಡಲಾಗಿತ್ತು.

‘ಅಕ್ರಮವಾಗಿ ದನದ ಮಾಂಸದ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದ್ದು, ಕೂಡಲೇ ತೆರವು ಮಾಡಬೇಕು’ ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಮುಖಂಡರು ನಗರಸಭೆಗೆ ಈಚೆಗೆ ಮನವಿ ಸಲ್ಲಿಸಿದ್ದರು. ನಗರಸಭೆ ಪೌರಾಯುಕ್ತರು, ತೆರವುಗೊಳಿಸುವಂತೆ ಮೌಖಿಕವಾಗಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಈ ಸಂದರ್ಭದಲ್ಲೇ ಘಟನೆ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ.

‘ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಮಾಡಬೇಕು. ಇಲ್ಲದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಅಂಗಡಿ ಮಾಲೀಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.