ಕಲಬುರ್ಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರ ಅಂತ್ಯಸಂಸ್ಕಾರ, ಕಲಬುರ್ಗಿ ಹೊರವಲಯದ ಸಾವಳಗಿ ಕ್ರಾಸ್ನಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ 2.30ಕ್ಕೆ ನೆರವೇರಿತು.

ನಗರದ ಅವರ ನಿವಾಸದಲ್ಲಿ ಸೋಮವಾರ ಮಧ್ಯಾಹ್ನ 1.30 ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಕೊರೊನಾ ಸೋಂಕು ಭಯದಿಂದಾಗಿ ಕೆಲವೇ ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಅವರ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು. ತಹಶೀಲ್ದಾರ್ ಮಲ್ಲೇಶಿ ತಂಗಾ ಅವರು ತಾಲ್ಲೂಕು ಆಡಳಿತದ ಪರವಾಗಿ ಗೌರವ ಸಲ್ಲಿಸಿದರು.

ಅಂತ್ಯಸಂಸ್ಕಾರದ ವೇಳೆ ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಡಾ.ಅಜಯ ಸಿಂಗ್, ಬಿ.ಜಿ. ಪಾಟೀಲ, ಮಾಜಿ ಶಾಸಕರಾದ ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ ಕಮಕನೂರ, ಹೋರಾಟಗಾರರಾದ ಮೀನಾಕ್ಷಿ ಬಾಳಿ, ಕೆ.ನೀಲಾ, ಹಿರಿಯ ಕಲಾವಿದ ವಿ.ಜಿ. ಅಂದಾನಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.