ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ (ಕೆಪಿಎಲ್) ನಡೆದಿದೆ ಎನ್ನಲಾದ ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಅಂತರರಾಷ್ಟ್ರೀಯ ಬುಕ್ಕಿಗಳ ಮೇಲೂ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನು ಹಲವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ’ ಎಂದು ಸಿಸಿಬಿಯ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

‘ಮ್ಯಾಚ್ ಫಿಕ್ಸಿಂಗ್ ಜಾಲ ದೊಡ್ಡ ಮಟ್ಟದಲ್ಲಿ ಹರಡಿರುವಂತೆ ಕಾಣುತ್ತಿದೆ. ಕೆಲ ಆಟಗಾರರು ಹಾಗೂ ಕೋಚ್‌ಗಳ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಹಾಗೂ ಐಸಿಸಿ ಅಧಿಕಾರಿಗಳನ್ನೂ ಕೋರಿದ್ದೇವೆ. ಅಂತರಾಷ್ಟ್ರೀಯ ಬುಕ್ಕಿಗಳ ಮೇಲೂ ಅನುಮಾನವಿದ್ದು, ಅವರ ಮೇಲೂ ಕಣ್ಣಿಟ್ಟಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.