ಬೆಂಗಳೂರು: ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳಿವಳಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ಪುನೀತ್ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಿಮ್ಮ ವಿರುದ್ಧ ರೌಡಿಪಟ್ಟಿ ತೆರೆಯಲು ಅನುಮತಿಗಾಗಿ ಚಾಮರಾಜಪೇಟೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ವರದಿ ಸಲ್ಲಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ಮೇಲೆ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ನನಗೆ ವಿವರಣೆ ಸಲ್ಲಿಸಬಹದು. ಇಲ್ಲದಿದ್ದರೆ ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು’ ಎಂದು ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು, ಪುನೀತ್‌ಗೆ ಜಾರಿಗೊಳಿಸಿರುವ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.