ಬೆಂಗಳೂರು: ರಾಜಕೀಯದಲ್ಲಿ ಕೀಳು ಭಾಷೆ ಬಳಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ 'ಯಾರಿಗೆ ಹುಟ್ಟಿರಬೇಕು' ಎಂಬ ವ್ಯಂಗ್ಯಾಸ್ತ್ರಗಳು ರಾಜಕೀಯ ಮುಖಂಡರಿಂದ ವ್ಯಕ್ತವಾಗುತ್ತಿವೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಫೇಸ್‌ಬುಕ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಬಿಳಿ ಟೋಪಿ ಧರಿಸಿಕೊಂಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. 'ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ?' ಎಂದು ಪ್ರಶ್ನಿಸಿದ್ದಾರೆ.

'ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ?' ಎಂದು ಪೋಸ್ಟ್ ಮಾಡಿರುವ ಸಿ.ಟಿ. ರವಿ ಮುಂದಿನ ಪೋಸ್ಟ್‌ನಲ್ಲಿ ಕನಕದಾಸರ ಮಾತುಗಳನ್ನು ಸ್ಮರಿಸಿದ್ದಾರೆ.

ಉಪಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗ: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

'ಕುಲ ಕುಲ ಕುಲವೆಂದು ಹೊಡೆದಾದಿರಿ ನಿಮ್ಮ
ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ..
ದಾಸಶ್ರೇಷ್ಠ ಕನಕದಾಸರ ಈ ಮಾತುಗಳನ್ನು ಎಂದೋ ಮರೆತುಬಿಟ್ಟು ಕುಲಗಳನ್ನು ಒಡೆದು, ಸಮಾಜವನ್ನು ಅಸ್ಥಿರಗೊಳಿಸಿ, ತಮ್ಮ ಬೇಳೆ ಬೇಯಿಸಿಕೊಳ್ಳುವುದೇ ರಾಜಕೀಯ ಎಂದು ಭಾವಿಸಿದ್ದು ದುರಂತ' ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.

ಒಂದೆಡೆ 'ಯಾರಿಗೆ ಹುಟ್ಟಿರಬೇಕು?' ಎಂದು ಪ್ರಶ್ನಿಸಿ, ಮತ್ತೊಂದೆಡೆ ಕನಕದಾಸರ ಮಾತುಗಳ ಸ್ಮರಣೆ ದ್ವಂದ್ವಾರ್ಥಗಳನ್ನು ನೀಡುವಂತಿವೆ.

ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ: ಎಚ್.ಡಿ.ಕುಮಾರಸ್ವಾಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.