ಬೆಂಗಳೂರು: ‘ಈ ಸರ್ಕಾರದಲ್ಲಿ ಪ್ರಭಾವಿ ಗುತ್ತಿಗೆದಾರರು ಮಾತ್ರ ಹಣ ಬಿಡುಗಡೆ ಮಾಡಿಸಿಕೊಳ್ಳುತ್ತಿದ್ದಾರೆ. ಅಲ್ಲದೇ, ಜನಪ್ರತಿನಿಧಿಗಳು ಮಧ್ಯ ಪ್ರವೇಶಿಸಿ, ಜ್ಯೇಷ್ಠತೆ ಉಲ್ಲಂಘಿಸಿ ಹಣ ಬಿಡುಗಡೆಗೆ ಒತ್ತಡ ಹೇರುತ್ತಿರುವುದರಿಂದ ಸಾಮಾನ್ಯ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬುಧವಾರ ಭೇಟಿ ಮಾಡಿ ಗುತ್ತಿಗೆದಾರರ ಪರವಾಗಿ ಮನವಿಯೊಂದನ್ನು ಅರ್ಪಿಸಿದರು. ಹಲವು ಗುತ್ತಿಗೆದಾರರು ಎಲ್ಲವನ್ನೂ ಕಳೆದುಕೊಂಡು ಆತ್ಮಹತ್ಯೆಯ ಹಾದಿಯನ್ನು ಹಿಡಿದಿದ್ದಾರೆ ಎಂದೂ ವಿವರಿಸಿದರು.

ವಿವಿಧ ಕಾಮಗಾರಿಗಳ ಗುತ್ತಿಗೆಯನ್ನು ಪ್ಯಾಕೇಜ್ ಮೂಲಕ ನೆರೆಯ ರಾಜ್ಯಗಳ ಗುತ್ತಿಗೆದಾರರಿಗೆ ನೀಡಲಾಗುತ್ತಿದ್ದು,ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಕೆಲಸವೇ ಸಿಗದಂತಾಗಿದೆ. ನೆರೆಯ ರಾಜ್ಯದ ಗುತ್ತಿಗೆದಾರರನ್ನು ಓಲೈಸಲೆಂದೇ ಅಧಿಕಾರಿಗಳು ಪ್ಯಾಕೇಜ್ ಪದ್ಧತಿ ಜಾರಿ ಮಾಡಿದ್ದು. ಪ್ಯಾಕೇಜ್ ಪದ್ಧತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಸುಮಾರು ₹5,000 ಕೋಟಿಗೂ ಹೆಚ್ಚು ಬಿಲ್ ಬಾಕಿ ಪಾವತಿ ಆಗಬೇಕಿದೆ. ಆದಷ್ಟು ಬೇಗ ಬಿಲ್ ಪಾವತಿಗೆ ಕ್ರಮ ತೆಗೆದು ಕೊಳ್ಳಬೇಕು ಎಂದೂ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.