ಜಲಾನಯನ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ. ಶನಿವಾರವೂ ಆಲಮಟ್ಟಿ, ನಾರಾಯಣಪುರ, ಕೃಷ್ಣರಾಜಸಾಗರ ಜಲಾಶಯಗಳಿಂದ ನೀರನ್ನು ನದಿಗೆ ಹರಿಸಲಾಗಿದ್ದು, ಕೆಲವೆಡೆ ಪ್ರವಾಹ ಸ್ಥಿತಿ ಎದುರಾಗಿದೆ.ರಾಜ್ಯದಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಆದರೆ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಎರಡು ದಿನಗಳ ಭಾರೀ ಮಳೆಯ ನಂತರ ಬ್ರಹ್ಮಗಿರಿ ಶ್ರೇಣಿಯಲ್ಲಿ ಶನಿವಾರ ಮಳೆ ಕಡಿಮೆಯಾಗಿತ್ತು.
ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯವು ಭರ್ತಿಯಾಗಿದ್ದು, ಗುರುವಾರ ಆರು ಕ್ರೆಸ್ಟ್‌ಗೇಟ್‌ಗಳ ಮೂಲಕ ಕಾಳಿ ನದಿಗೆ ನೀರು ಹರಿಸಿದ ದೃಶ್ಯವು ಕ್ಯಾಮೆರಾದಲ್ಲಿ ಹೀಗೆ ಸೆರೆಯಾಯಿತು. ಚಿತ್ರ: ದರ್ಶನ್ ನಾಯ್ಕ ಅವರ್ಸಾ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರು ಬಂಟ್ವಾಳ ತಾಲೂಕ್ ದ ನೇತ್ರಾವತಿ ನದಿಯ ತುಂಬೆ ಡ್ಯಾಮ್ ಮಳೆ ನೀರಿನಿಂದ ತುಂಬಿ ಹರಿಯುತ್ತಿರುವ ದೃಶ್ಯ. ಪ್ರಜಾವಾಣಿ ಚಿತ್ರ/ಗೋವಿಂದರಾಜ ಜವಳಿ
ಯಾದಗಿರಿ ಜಿಲ್ಲೆಯ ನಾರಾಯಣಪುರ ಬಸವಸಾಗರ ಜಲಾಶಯದಿಂದ ಶನಿವಾರ 21 ಕ್ರಸ್ಟ್ ಗೇಟ್ ಗಳ ಮೂಲಕ 2.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಯಿತು
ಯಾದಗಿರಿ ಜಿಲ್ಲೆಯ ನಾರಾಯಣಪುರ ಬಸವಸಾಗರ ಜಲಾಶಯದಿಂದ ಶನಿವಾರ 21 ಕ್ರಸ್ಟ್ ಗೇಟ್ ಗಳ ಮೂಲಕ 2.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಯಿತು
ದಾವಣಗೆರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಾಲೂಕಿನ ದೇವರಬೆಳಕೆರೆ ಚೆಕ್ ಡ್ಯಾಮ್ ತುಂಬಿ ಹರಿಯುತ್ತಿರುವ (ಕೋಡಿ) ದೃಶ್ಯ –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ಹಾಸನ ಜಿಲ್ಲೆಯ ಭರ್ತಿಯಾಗಿರುವ ಗೊರೂರು ಜಲಾಶಯ
ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಜಲಾಶಯ ಭರ್ತಿಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಗೇಟ್‌ಗಳ ಮೂಲಕ ಹೊರಕ್ಕೆ ಬಿಡಲಾಗಿದ್ದು, ಈ ದೃಶ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ. ಪ್ರಜಾವಾಣಿ ಚಿತ್ರ/ ಎಚ್.ಎಸ್. ರಘು
ಕಮಲಾಪುರ ತಾಲೂಕಿನ ಚಂದ್ರಕಾಂತ್ ಪಾಟೀಲ್ ಡ್ಯಾಮ್ ನಲ್ಲಿ ಭರ್ತಿಯಾಗುವ ಗಂಡೋರಿನಾಲಾ ಗುರುವಾರ ಕಂಡುಬಂತು... / ಪ್ರಶಾಂತ್ ಎಚ್ ಜಿ
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಶನಿವಾರ ನೀರಿನ ಸಂಗ್ರಹ ಹೆಚ್ಚಾಗಿರುವುದು
ಆಲಮಟ್ಟಿ ಜಲಾಶಯದ ಹಿನ್ನೀರು ಶನಿವಾರ ಸಂಜೆ ಕಂಡಿದ್ದು ಹೀಗೆ ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೇಕರ
ಕಬಿನಿ ಜಲಾಶಯದಿಂದ ಆ.4ರಂದು ನೀರು ಹರಿದು ಹೋಗುತ್ತಿರುವ ದೃಶ್ಯ