ಹುಬ್ಬಳ್ಳಿ: ‘ರಾಜಕೀಯ ಪ್ರೇರಿತವಾಗಿ ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಹೆಸರಿದ್ದವರ್ಯಾರೂ ಯಾವುದರಲ್ಲೂ ಭಾಗಿಯಾಗಿಲ್ಲ ಎಂದು ಸಾಬೀತಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಇದು ರಾಜಕಾರಣ, ಪ್ರತಿಯೊಂದು ಹಂತದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ. ಅವರು ಅಧಿಕಾರದಲ್ಲಿ ಇದ್ದಾಗ ಎಷ್ಟೋ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಆರ್ಎಸ್ಎಸ್ಎಸ್ ಮೇಲೆ, ಬಜರಂಗದಳದ ಮೇಲೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಸಹ ವಾಪಸ್ ಪಡೆದಿದ್ದಾರೆ. ಅದರ ಪಟ್ಟಿಯನ್ನೇ ಕೊಡುತ್ತೇವೆ’ ಎಂದರು.

‘ಬಿಜೆಪಿ ರಾಜಕಾರಣ ಮಾಡುತ್ತದೆ ಎಂದು, ನಾವು ಮಾಡುವುದಿಲ್ಲ. ಶ್ರೀಸಾಮಾನ್ಯರಿಗೆ ನಾವು ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ, ರಾಜಕೀಯ ಒತ್ತಡದಿಂದ ಎನ್ಐಎ ದೋಷಾರೋಪ ಪಟ್ಟಿಯಲ್ಲಿ ಸಲ್ಲಿಕೆ ಮಾಡಿರಬಹುದು’ ಎಂದು ಅಭಿಪ್ರಾಯಪಟ್ಟರು.
.ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ಸಿದ್ದರಾಮಯ್ಯ.ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಕಪ್ಪು ಬಟ್ಟೆ ಪ್ರದರ್ಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.