ಬೆಂಗಳೂರು: ‘ಗ್ಯಾರಂಟಿ’ ಯೋಜನೆಗಳ ಕುರಿತು ಮಹಾರಾಷ್ಟ್ರದಲ್ಲಿ ಸುಳ್ಳು ಪ್ರಚಾರ ನಡೆಸಿದ್ದ ಬಿಜೆಪಿ ವಿರುದ್ಧ ದೂರು ದಾಖಲಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿ ಈ ವಿಚಾರವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಬಿಜೆಪಿ ನಾಯಕರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಕರ್ನಾಟಕದಲ್ಲಿನ ‘ಗ್ಯಾರಂಟಿ’ ಯೋಜನೆಗಳ ಜಾರಿ ಬಗ್ಗೆ ಪರಿಶೀಲನೆ ನಡೆಸಲು ಬಿಜೆಪಿ ನಾಯಕರನ್ನು ಆಹ್ವಾನಿಸಿ, ಜಾಹೀರಾತು ನೀಡಿದ್ದೆವು. ಈಗ ಮಾನಹಾನಿ ಪ್ರಕರಣ ದಾಖಲಿಸಲಾಗುವುದು’ ಎಂದರು.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಏಳೆಂಟು ವರ್ಷಗಳಿಂದ ನಿರಂತರವಾಗಿ ಅದಾನಿ ಕಂಪನಿಗಳ ಬಗ್ಗೆ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಜನರ ಗಮನ ಸೆಳೆದಿದ್ದಾರೆ. ಈ ವಿಚಾರ ಸಂಸತ್ತಿನಿಂದ ಬೀದಿಗಳವರೆಗೆ ಚರ್ಚೆಯಾದರೂ, ಕೇಂದ್ರ ತನಿಖಾ ಸಂಸ್ಥೆಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

‘ಗ್ರೀನ್ ಎನರ್ಜಿ’ ಯೋಜನೆ ಅಕ್ರಮ ಕುರಿತು ಅಮೆರಿಕದ ನ್ಯಾಯಾಲಯ ಆದೇಶ ನೀಡಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ವಿರೋಧ ಪಕ್ಷಗಳ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವುದರಲ್ಲೇ ಕೇಂದ್ರ ಸರ್ಕಾರ ತಲ್ಲೀನವಾಗಿದೆ. ಈಗಲಾದರೂ ಅದಾನಿ ಪ್ರಕರಣದತ್ತ ಗಮನಹರಿಸಬೇಕು. ದೇಶದ ಜನಸಾಮಾನ್ಯರು ಅವರ ಕಂಪನಿಗಳ ಮೇಲೆ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಜನರ ರಕ್ಷಣೆಗಾಗಿಯಾದರೂ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.