ಬೆಂಗಳೂರು: ಮಾನನಷ್ಟ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ನಿಟ್ಟಿನಲ್ಲಿ, ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ವಿರುದ್ಧ ಅವರಿಗೆ ಸಮನ್ಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಎನ್.ಆರ್.ರಮೇಶ್ ದಾಖಲಿಸಿದ್ದ ಖಾಸಗಿ ದೂರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶೆ ಜೆ.ಪ್ರೀತ್ ಮಂಗಳವಾರ ವಿಚಾರಣೆ ನಡೆಸಿದರು.

ಆರೋಪಿ ಕೃಷ್ಣಾರೆಡ್ಡಿ ಅವರಿಗೆ ಈ ಹಿಂದಿನ ವಿಚಾರಣೆ ವೇಳೆಯೇ ಸಮನ್ಸ್ ಜಾರಿಗೊಳಿಸಲಾಗಿತ್ತು. ಆದರೆ, ಅವರು ಮಂಗಳವಾರ ಗೈರಾಗಿದ್ದರು. ಸಮನ್ಸ್ ಇನ್ನೂ ಜಾರಿಯಾಗದ ಕಾರಣ ಪುನಃ ಜಾರಿಗೆ ಆದೇಶಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದರು. ದೂರುದಾರ ಎನ್.ಆರ್.ರಮೇಶ್ ಪರ ವಕೀಲ ಮೋಹನ್ ಎಸ್.ರೆಡ್ಡಿ ಹಾಜರಿದ್ದರು.

ಪ್ರಕರಣವೇನು?: ‘ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗಣೇಶ ಮಂದಿರ ವಾರ್ಡ್ ವ್ಯಾಪ್ತಿಯ ಬನಗಿರಿ ನಗರ ವ್ಯಾಪ್ತಿಗೆ ಒಳಪಡುವ ಕತ್ರಿಗುಪ್ಪೆಯ ಸರ್ವೇ ನಂ.125 ಮತ್ತು 126ಕ್ಕೆ ಸೇರಿದ ಅಂದಾಜು ₹350 ಕೋಟಿ ಮೌಲ್ಯದ 4.31 ಎಕರೆ ಬಿ.ಖರಾಬು ಜಮೀನಿಗೆ 41 ಮಂದಿ ಘಟಾನುಘಟಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ ನಡೆಸಿದ್ದಾರೆ’ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು. ಈ ಸಂಬಂಧ ಲೋಕಾಯುಕ್ತ ಮತ್ತು ಬೆಂಗಳೂರು ಮಹಾನಗರ ಕಾರ್ಯಪಡೆಯಲ್ಲಿ (ಬಿಎಂಟಿಎಫ್) ದೂರು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ‘ಅಂದು ಸದನ ಸಮಿತಿಯ ಅಧ್ಯಕ್ಷರೂ ಆಗಿದ್ದ ಕೃಷ್ಣಾರೆಡ್ಡಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಆದೇಶಿಸುವ ಬದಲಾಗಿ, ಪಾಲಿಕೆಯ ಸ್ವತ್ತನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದ ಅಧಿಕಾರಿಯ ವಿರುದ್ಧವೇ ನಿರ್ಣಯ ತೆಗೆದುಕೊಂಡಿದ್ದರು’ ಎಂದು ಆರೋಪದಲ್ಲಿ ವಿವರಿಸಲಾಗಿತ್ತು.

‘ಅಂತೆಯೇ, ಸದನ ಸಮಿತಿ ಪ್ರಕರಣವನ್ನು ಆರು ತಿಂಗಳಿಗೂ ಹೆಚ್ಚು ಕಾಲ ಇತ್ಯರ್ಥಗೊಳಿಸದೇ ವಿಳಂಬ ಮಾಡಿದೆ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೇ ವ್ಯತಿರಿಕ್ತ ನಿರ್ಣಯಕ್ಕೆ ಮುಂದಾಗಿದೆ’ ಎಂದು ಆಕ್ಷೇಪಿಸಿ ಎನ್.ಆರ್.ರಮೇಶ್ ಮಾಧ್ಯಮಗೋಷ್ಠಿ ನಡೆಸಿ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ, ಕೃಷ್ಣಾರೆಡ್ಡಿ ಅವರೂ ಹೇಳಿಕೆಯೊಂದನ್ನು ನೀಡಿದ್ದರು. ‘ಈ ಹೇಳಿಕೆಯಲ್ಲಿ ಕೃಷ್ಣಾರೆಡ್ಡಿ ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ನನಗೆ ಮಾನನಷ್ಟ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ಎನ್.ಆರ್.ರಮೇಶ್ ಅವರು ಕೃಷ್ಣಾರೆಡ್ಡಿ ವಿರುದ್ಧ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಅಪರಾಧವನ್ನು ಸಂಜ್ಞೇಯ ಎಂದು ಪರಿಗಣಿಸಿರುವ ನ್ಯಾಯಾಲಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲು ಚಿಂತಾಮಣಿ ಪೊಲೀಸರಿಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.