ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ದೂರು ನೀಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

‘ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರ ಆಗಸ್ಟ್ 2ರಂದು ತನಿಖೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ ನಂತರ ಸಿದ್ದರಾಮಯ್ಯ ಮಾಧ್ಯಮ ಗೋಷ್ಠಿ ನಡೆಸಿದ್ದರು. ಅಲ್ಲಿ ನನ್ನ ವಿರುದ್ಧ ಮಾನ ಹಾನಿಕರ ವಾದ ಕಪೋಲಕಲ್ಪಿತ, ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಏಕವಚನದಲ್ಲಿ ನಿಂದಿಸುವ ಮೂಲಕ ನನ್ನ ಘನತೆಗೆ ಕುಂದು ತಂದಿದ್ದಾರೆ. ನನ್ನನ್ನು ಬ್ಲ್ಯಾಕ್ಮೇಲರ್ ಎಂದು ಜರಿದಿದ್ದಾರೆ. ಸುಪ್ರೀಂ ಕೋರ್ಟ್ ನನಗೆ ₹ 25 ಲಕ್ಷ ದಂಡ ವಿಧಿಸಿದೆ ಎಂದಿದ್ದಾರೆ. ಇದನ್ನು ಕನ್ನಡ ಮತ್ತು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಂತೆಯೇ, ಈ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವ ಮೂಲಕ ನನ್ನ ತೇಜೋವಧೆ ಮಾಡಲಾಗಿದೆ. ಇವೆಲ್ಲವೂ ನಿರಾಧಾರ ಆರೋಪಗಳು’ ಎಂದು ದೂರಿನಲ್ಲಿ ವಿವರಿಸಿದ್ದಾರೆ.

‘ಸಿದ್ದರಾಮಯ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಕಾಯ್ದೆ-2023ರ ಕಲಂ 356 (1) ಮತ್ತು (2)ರ ಅನ್ವಯ ಅಪರಾಧ ಪ್ರಕರಣ ದಾಖಲಿಸಬೇಕು’ ಎಂದು ಅಬ್ರಹಾಂ ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.