ಬೆಂಗಳೂರು: ‘ಸಾರ್ವಜನಿಕ ಉದ್ಯಾನಗಳಿಗೆ ಸಾಕುನಾಯಿ ಕರೆತರುವ ಸಾರ್ವಜನಿಕರು ಅವುಗಳ ಮಲದ ತ್ಯಾಜ್ಯ ವಿಲೇವಾರಿಗೆ ಕೈ ಚೀಲಗಳನ್ನು ತೆಗೆದುಕೊಂಡು ಬರಬೇಕು ಎಂದು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ’ ಎಂದು ಹೈಕೋರ್ಟ್ ಪ್ರತಿಪಾದಿಸಿದೆ. ‘ನಾಯಿಗಳ ಉಪಟಳದಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಾಗಿದ್ದು, ಸಾರ್ವಜನಿಕ ಉದ್ಯಾನಗಳಲ್ಲಿ ಎಲ್ಲ ರೀತಿಯ ಸ್ವಚ್ಛತೆ ಕಾಯ್ದುಕೊಳ್ಳುವುದು ಕಡ್ಡಾಯವಾಗಬೇಕು’ ಎಂದು ಆದೇಶಿಸಿದೆ.

‘ಉದ್ಯಾನಗಳಿಗೆ ಸಾಕುನಾಯಿಗಳನ್ನು ಕರೆತರುವವವರು ಅವುಗಳ ಮಲ ವಿಲೇವಾರಿಗೆ ಕೈ ಚೀಲ ತರುವುದನ್ನು ಕಡ್ಡಾಯಗೊಳಿಸಲು ಬಿಬಿಎಂಪಿಗೆ ನಿರ್ದೇಶಿಸಬೇಕು ಮತ್ತು ಘನತ್ಯಾಜ್ಯ ನಿರ್ವಹಣಾ ಬೈ–ಲಾ ಜಾರಿಗೆ ನಿರ್ದೇಶಿಸಬೇಕು’ ಎಂದು ಕೋರಿ; ಸರ್ಕಾರೇತರ ಸ್ವಯಂಸೇವಾ ಸಂಸ್ಥೆ ‘ಕ್ಯೂಪಾ’ (ಮೆಸರ್ಸ್ ಕಂಪ್ಯಾಷನ್ ಅನ್ಲಿಮಿಟೆಡ್ ಪ್ಲಸ್ ಆ್ಯಕ್ಷನ್) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯನ್ನು ವಿಲೇವಾರಿ ಮಾಡಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸಂಬಂಧ ಹಲವು ಮಾರ್ಗಸೂಚಿಗಳನ್ನೂ ಹೊರಡಿಸಿದೆ.

‘ಸಾಕುಪ್ರಾಣಿಗಳು ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ವಿಸರ್ಜಿಸುವ ತ್ಯಾಜ್ಯ ಸ್ವಚ್ಛಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 1288 ದೂರುಗಳು ದಾಖಲಾಗಿವೆ’ ಎಂದು ಅರ್ಜಿದಾರರು ದೂರಿದ್ದರು.

ಮಾರ್ಗಸೂಚಿ

ಸ್ವಚ್ಛತೆ ಕಾಯ್ದಕೊಳ್ಳುವುದು ಮತ್ತು ಇತರೆ ನಿಯಮಗಳನ್ನು ಉಲ್ಲಂಘಿಸುವವರಿಗೆ ವಿಧಿಸಲಾಗುವ ದಂಡಕ್ಕಿಂತಲೂ, ಮಲವಿಸರ್ಜನೆಗೆ ಕಾರಣವಾಗುವ ನಾಯಿಗಳನ್ನು ಸಾಕಿರುವ ಮಾಲೀಕರಿಗೆ ವಿಧಿಸುವ ದಂಡ ಹೆಚ್ಚಿನ ಪ್ರಮಾಣದ್ದಾಗಿರಬೇಕು.

ಕರ್ನಾಟಕ ಉದ್ಯಾನಗಳು, ಆಟದ ಮೈದಾನಗಳು ಮತ್ತು ಮುಕ್ತ ಸ್ಥಳಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ–1985 ಅನ್ನು ಬಿಬಿಎಂಪಿ ಅಧಿಕಾರಿಗಳು ಅಕ್ಷರಶಃ ಜಾರಿಗೆ ತರಬೇಕು.

ಉದ್ಯಾನಗಳೂ ಸೇರಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು–2016 ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ನಿಯಮಗಳ ತಿದ್ದುಪಡಿಗೆ ಪಾಲಿಕೆ ಕ್ರಮ ವಹಿಸಬೇಕು.

ಉದ್ಯಾನಗಳಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ನಿರ್ವಹಣೆಗೆ ಸರ್ಕಾರ ಸೇರಿದಂತೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಗಳು ಅಗತ್ಯ ಬಜೆಟ್ ಮೀಸಲಿರಿಸಬೇಕು.

ಉದ್ಯಾನಗಳ ಬಗೆಗಿನ ಜಾಗ್ರತೆ ಕಾಯ್ದುಕೊಳ್ಳಲು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಶಾಶ್ವತವಾದ ಕಾರ್ಯವಿಧಾನವನ್ನು ರೂಪಿಸಿ ಅಭಿವೃದ್ಧಿ ಪಡಿಸಬೇಕು.

ಉದ್ಯಾನಗಳಲ್ಲಿ ಉಗುಳುವುದು, ಕಸ ಎಸೆಯುವುದು, ಸಾಕುಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ನೀಡುವವರನ್ನು ನಿಯಂತ್ರಿಸಿ ಸ್ವಚ್ಛತೆ ಕಾಯ್ದುಕೊಳ್ಳುವುದು ಮತ್ತು ಉಲ್ಲಂಘಿಸುವವರಿಗೆ ದಂಡ ವಿಧಿಸುವುದು ತೋಟಗಾರಿಕಾ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಹೊಣೆಯಾಗಿದೆ.

ಉದ್ಯಾನಗಳ ಸಂರಕ್ಷಣೆ ಮತ್ತು ಮೇಲ್ವಿಚಾರಣೆಗಾಗಿ ತಂಡಗಳನ್ನು ನಿಯೋಜಿಸುವ ಸಂಬಂಧ ಸೂಕ್ತ ನಿಯಮಗಳನ್ನು ಅಳವಡಿಸುವುದು ಮತ್ತು ತಪ್ಪಿತಸ್ಥರಿಗೆ ದಂಡ ವಿಧಿಸಲು ಬಿಬಿಎಂಪಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ತೋಟಗಾರಿಕೆ ಇಲಾಖೆಯ ಒಬ್ಬ ಮತ್ತು ಬಿಬಿಎಂಪಿಯ ಇಬ್ಬರು ಅಧಿಕಾರಿಗಳಿರುವ ಮೂವರು ಸದಸ್ಯರ ತಂಡ ರಚಿಸಬೇಕು. ಇದು, ಪ್ರಮುಖ ಉದ್ಯಾನಗಳಿಗೆ ಭೇಟಿ ನೀಡಿ ಸ್ವಚ್ಛತೆಗೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.