ಕಾಶ್ಮೀರದಲ್ಲಿ ಮಹಿಳೆಯರೆಲ್ಲರೂ ಸುರಕ್ಷಿತರಾಗಿದ್ದಾರೆಯೇ? ಅವರ ಮೇಲೆ ಯಾವುದೇ ದೌರ್ಜನ್ಯಗಳು ನಡೆಯುತ್ತಿಲ್ಲವೇ? ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವ ಬದಲಿಗೆ ದೂರುದಾರರ ಬೆನ್ನು ಹತ್ತಿರುವ ಸರ್ಕಾರದ ದುರುದ್ದೇಶ ಅರ್ಥವಾಗದಷ್ಟು ದೇಶದ ಜನ ಮೂರ್ಖರಲ್ಲ @BJP4India, @narendramodi, @AmitShah. 2/5
ಉದ್ಯಮಿ ಅದಾನಿ ಹಗರಣಗಳ ಬಗ್ಗೆ ದನಿ ಎತ್ತಿದ ದಿನದಿಂದ @narendramodi ಅವರ @BJP4India ಸರ್ಕಾರ @RahulGandhi ಅವರ ಬೆನ್ನು ಹತ್ತಿದೆ ಎಂದರೆ ಆರೋಪದಲ್ಲಿ ಸತ್ಯ ಇದೆ ಎಂದರ್ಥ ಅಲ್ಲವೇ? ಕಳ್ಳರ ಮನಸ್ಸು ಹುಳ್ಳಗೆ. 3/5
ಬಿಜೆಪಿಗೆ ಮಹಿಳೆಯರ ಬಗ್ಗೆ ಅಷ್ಟೊಂದು ಕಾಳಜಿ-ಗೌರವ ಇರುವುದಾಗಿದ್ದರೆ ಮೊದಲು ತಮ್ಮ ಪಕ್ಷದಲ್ಲಿ ಮಹಿಳಾ ಪೀಡನೆಯ ಆರೋಪ ಹೊತ್ತಿರುವವರ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಿ. ಆರೋಪಿಗಳ ಪಟ್ಟಿ ಉದ್ದ ಇದೆ @AmitShah, @narendramodi. 4/5 pic.twitter.com/DZ5WykY5Oh
ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ @BJP4India ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ @RahulGandhi ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ. 5/5