ಬೆಂಗಳೂರು: ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಮತ್ತು ಶೀಘ್ರದಲ್ಲೇ ಜಾರಿ ಮಾಡಬೇಕು ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘವು ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿತು.

ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗ ಸಲ್ಲಿಸಿದ ಮನವಿ ಪತ್ರದಲ್ಲಿ, ‘ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿ ಮಾಡಬೇಕು. ಇಲ್ಲದೇ ಇದ್ದಲ್ಲಿ, ಇದೇ 29ರಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದೆ.

ಮನವಿ ಪತ್ರ ಸಲ್ಲಿಸಿದ ನಂತರ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಸರ್ಕಾರಿ ನೌಕರರ ಸಂಘ, ಸಚಿವಾಲಯ, ವಿಧಾನಸಭೆ ಹಾಗೂ ವಿಧಾನ ಪರಿಷತ್ ನೌಕರರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.