ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದಿದ್ದು, ಹೊಸದಾಗಿ 437 ಮಂದಿ ಈ ಜ್ವರ ಪೀಡಿತರಾಗಿರುವುದು ಶುಕ್ರವಾರ ದೃಢಪಟ್ಟಿದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 24 ಗಂಟೆಗಳ ಅವಧಿಯಲ್ಲಿ 2,704 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಏಳು ಮಂದಿ ಒಂದು ವರ್ಷದೊಳಗಿನವರಾದರೆ, 154 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 276 ಮಂದಿ 18 ವರ್ಷ ಮೇಲ್ಪಟ್ಟವರಾಗಿದ್ದಾರೆ.

23 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 526 ಡೆಂಗಿ ಶಂಕಿತರಿಗೆ ಪರೀಕ್ಷೆ ಮಾಡಲಾಗಿದ್ದು, 165 ಮಂದಿಗೆ ಡೆಂಗಿ ದೃಢಪಟ್ಟಿದೆ. ಮಂಡ್ಯದಲ್ಲಿ 47, ಬೆಳಗಾವಿಯಲ್ಲಿ 32, ದಾವಣಗೆರೆಯಲ್ಲಿ 24, ಕಲಬುರಗಿಯಲ್ಲಿ 20, ಕೋಲಾರದಲ್ಲಿ 19, ಮೈಸೂರಿನಲ್ಲಿ 17, ಗದಗದಲ್ಲಿ 15, ರಾಮನಗರದಲ್ಲಿ 14, ಬೆಂಗಳೂರು ನಗರ, ಬೀದರ್, ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 10 ಪ್ರಕರಣಗಳು ಖಚಿತಪಟ್ಟಿವೆ. ಉಳಿದೆಡೆ ಇದಕ್ಕಿಂತ ಕಡಿಮೆ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 388 ಡೆಂಗಿ ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗಿ ಪ್ರಕರಣಗಳ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ. ಡೆಂಗಿ ಪೀಡಿತರಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.