ಬೆಂಗಳೂರು: ರಾಜ್ಯದಲ್ಲಿ 469 ಡೆಂಗಿ ಪ್ರಕರಣಗಳು ಭಾನುವಾರ ಹೊಸದಾಗಿ ದೃಢಪಟ್ಟಿವೆ. ಇದರಿಂದಾಗಿ ಡೆಂಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,428ಕ್ಕೆ ಏರಿಕೆಯಾಗಿದೆ.

24 ಗಂಟೆಗಳ ಅವಧಿಯಲ್ಲಿ 3,376 ಪರೀಕ್ಷೆಗಳನ್ನು ನಡೆಸಲಾಗಿದ್ದು, 23 ಜಿಲ್ಲೆಗಳಲ್ಲಿ ಹೊಸದಾಗಿ ಡೆಂಗಿ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,749 ಪರೀಕ್ಷೆಗಳನ್ನು ನಡೆಸಲಾಗಿದ್ದು, 292 ಪ್ರಕರಣಗಳು ದೃಢಪಟ್ಟಿವೆ. ಕಲಬುರಗಿಯಲ್ಲಿ 20, ಉಡುಪಿಯಲ್ಲಿ 17, ಮೈಸೂರಿನಲ್ಲಿ 15, ರಾಮನಗರದಲ್ಲಿ 14, ಧಾರವಾಡದಲ್ಲಿ 12, ಬಳ್ಳಾರಿಯಲ್ಲಿ 11, ಶಿವಮೊಗ್ಗ, ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ತಲಾ 10 ಪ್ರಕರಣಗಳು ಹೊಸದಾಗಿ ಖಚಿತಪಟ್ಟಿವೆ. ಉಳಿದೆಡೆ ಇದಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿವೆ.

ಡೆಂಗಿ ಪೀಡಿತರಲ್ಲಿ ಸದ್ಯ 2,866 ಮಂದಿ ಮನೆ ಆರೈಕೆಗೆ ಒಳಗಾದರೆ, 14 ಮಂದಿ ತೀವ್ರ ನಿಗಾ ಘಟಕದಲ್ಲಿರುವುದೂ (ಐಸಿಯು) ಸೇರಿದಂತೆ 562 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ.

ಡೆಂಗಿ ಪತ್ತೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೆ 98,039 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, 14,223 ಮಂದಿಯಲ್ಲಿ ಡೆಂಗಿ ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 6,382 ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.