ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಮೈಸೂರು ಹಾಗೂ ಬೆಂಗಳೂರು ವಿಭಾಗದ ಜಿಲ್ಲೆಗಳ ಜಿಲ್ಲಾ ಉಪ ನಿರ್ದೇಶಕರ (ಡಿಡಿಪಿಯು) ಮೇಲುಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿಗೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲಾಮಟ್ಟದ ಕಚೇರಿಗಳ ದೈನಂದಿನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಇಂತಹ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒಗಳು ಮೇಲುಸ್ತುವಾರಿ ನೋಡಿಕೊಳ್ಳುವರು. ಕಲಬುರಗಿ ಹಾಗೂ ಧಾರವಾಡ ವಲಯಗಳ ಉಪ ನಿರ್ದೇಶಕರ ಮೇಲುಸ್ತುವಾರಿಯನ್ನು ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರು ನೋಡಿಕೊಳ್ಳಲಿದ್ದಾರೆ ಎಂದು ವಿವರಿಸಲಾಗಿದೆ.

ಉಪನ್ಯಾಸಕರ ಸಂಘ ಖಂಡನೆ:

ಸರ್ಕಾರದ ಆದೇಶವನ್ನು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಖಂಡಿಸಿದೆ. ಇಲಾಖೆ ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಬೇರೆ ಬೇರೆ ಕಾಲಘಟ್ಟದಲ್ಲಿ ಐದು ಸಮಿತಿಗಳು ನೀಡಿರುವ ವರದಿ ಆಧಾರದಲ್ಲಿ ಸ್ವತಂತ್ರ ಅಸ್ತಿತ್ವ ಪಡೆದುಕೊಂಡಿದೆ. ಈಗ ಇರುವ ವ್ಯವಸ್ಥೆಯಂತೆ ಜಿಲ್ಲಾಧಿಕಾರಿಗಳು ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದು, ಸಮರ್ಪಕವಾಗಿ ಕಾರ್ಯಗಳು ನಡೆಯುತ್ತಿವೆ. ಇಂತಹ ಆದೇಶಗಳಿಂದ ಭವಿಷ್ಯದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರತ್ಯೇಕ ಅಸ್ತಿತ್ವಕ್ಕೆ ಧಕ್ಕೆ ಬರಬಹುದು. ತಕ್ಷಣ ಆದೇಶ ಹಿಂಪಡೆಯಬೇಕು ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ, ಕಾರ್ಯಾಧ್ಯಕ್ಷ ಎಸ್.ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಶಿವರಾಮ್ ಬಿ. ಮಾಲೀಪಾಟೀಲ, ಖಂಜಾಂಚಿ ಜಯಣ್ಣ ವಿನಂತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.