ಬೆಳಗಾವಿ: ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಬುಧವಾರ (ಇದೇ 19) ಚುನಾವಣೆ ನಡೆಯುವ ಸಾಧ್ಯತೆ ಇದೆ.

ಸಭಾಪತಿ ಸ್ಥಾನಕ್ಕೆ ಎಸ್.ಆರ್.ಪಾಟೀಲ ಅವರನ್ನು ನೇಮಿಸಲು ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಒಲವು ತೋರಿದ್ದರು. ಆದರೆ, ಮೂಲ ಕಾಂಗ್ರೆಸಿಗರು ಒಗ್ಗಟ್ಟು ಪ್ರದರ್ಶಿಸಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುರಿಯಾಳನ್ನಾಗಿ ಮಾಡಿದ್ದರು. ಸಭಾಪತಿ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಹೀಗಾಗಿ, ಉಪಸಭಾಪತಿ ಸ್ಥಾನ ಜೆಡಿಎಸ್ಗೆ ಒಲಿಯಲಿದೆ.

ಪಕ್ಷದ ಕೆ.ಟಿ.ಶ್ರೀಕಂಠೇಗೌಡ ಹಾಗೂ ಚೌಡರೆಡ್ಡಿ ತೂಪಲ್ಲಿ ಈ ಹುದ್ದೆಗೆ ಪ್ರಬಲ ಆಕಾಂಕ್ಷಿಗಳಾಗಿದ್ದರು. ಶ್ರೀಕಂಠೇಗೌಡ ಅವರಿಗೆ ಹುದ್ದೆ ಒಲಿಯುವ ಸಾಧ್ಯತೆ ಇದೆ. ತೂಪಲ್ಲಿ ಅವರನ್ನು ಪರಿಷತ್ನ ಮುಖ್ಯ ಸಚೇತಕರನ್ನಾಗಿ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.