ಕಲಬುರ್ಗಿ: ಇಲ್ಲಿನ ಧಾರ್ಮಿಕ ಕ್ಷೇತ್ರವಾದ ದೇವಲ ಗಾಣಗಾಪುರಕ್ಕೆ ಸೋಮವಾರ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರುದತ್ತಾತ್ರೇಯನ ದರ್ಶನ ಪಡೆದರು.

ನಂತರ ಮಾತನಾಡಿದ ಅವರು, ಇವತ್ತು ಸೋಮವಾರ ಗಾಣಗಾಪುರದ ದತ್ತಾತ್ರೇಯನ ದರ್ಶನ ಪಡೆಯಲು ಬಂದಿದ್ದೇನೆ. ಗುರು ದತ್ತನ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಇದು ಅತ್ಯಂತ ಪುಣ್ಯದ ಕ್ಷೇತ್ರ. ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳು ಕೊನೆಗೊಂಡು ಶಾಂತಿ ಸಹಬಾಳ್ವೆಯಿಂದ ಬದುಕು ನಡೆಯಲೆಂದು ಪ್ರಾರ್ಥಿಸಿದ್ದೇನೆ ಎಂದರು.

50 ವರ್ಷಗಳ ಹಿಂದೆ ಇಲ್ಲಿಗೆ ಬಂದಿದ್ದೆ. ಇವತ್ತು ಮತ್ತೆ ಬಂದು ಪೂಜೆ ಸಲ್ಲಿಸಿದ್ದೇನೆ. ನಾಡಿನ ಎಲ್ಲ ಜನರಿಗೂ ಕೂಡ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದು ಹೇಳಿದರು.

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಏಳುಬೀಳು ಕಂಡಿದ್ದೇನೆ. ಈ ಭಾಗದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.