'ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಆಗಿಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು. 'ಮತದಾನ ಮಾಡಲಾಗದ್ದಕ್ಕೆ ಬೇಸರವಿದೆ. ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಮಧ್ಯಾಹ್ನದ ಒಳಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಆರೋಗ್ಯ ಸ್ಥಿತಿ ಸ್ಥಿರವಾಗಲು ತಡವಾಯಿತು' ಎಂದು ಯಲ್ಲಾಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.