ನವದೆಹಲಿ: ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.
.ದೇಶದಲ್ಲಿ ಇದೇ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪ ಪತ್ತೆ .
ಲೋಕಸಭೆಗೆ ಗುರುವಾರ ಲಿಖಿತ ಉತ್ತರ ನೀಡಿರುವ ಸಚಿವರು, ‘ಲಿಥಿಯಂ ಸಂಪನ್ಮೂಲಗಳನ್ನು ಗುರುತಿಸಲು ಮತ್ತು ಅಂದಾಜು ಮಾಡಲು ಯಾದಗಿರಿ ಜಿಲ್ಲೆಯಲ್ಲಿ ಪ್ರಾಥಮಿಕ ಸಮೀಕ್ಷೆ ಮತ್ತು ಸೀಮಿತ ಭೂಗರ್ಭದ ಅನ್ವೇಷಣೆಯನ್ನು ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಮರಳಗಾಲ–ಅಲ್ಲಾಪಟ್ಟಣ ಪ್ರದೇಶದಲ್ಲಿ 1600 ಟನ್ಗಳಷ್ಟು ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ’ ಎಂದರು.
.ಲಿಥಿಯಂ ಬೇಡ, ಜಲಜನಕ ಇಂಧನ ಬಳಸಿ: ಮಾಧವನ್ ನಾಯರ್ ಸಲಹೆ.
ಆಧುನಿಕ ತಂತ್ರಜ್ಞಾನದಲ್ಲಿ ಲಿಥಿಯಂ ಲೋಹವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ಸೆರಾಮಿಕ್ಸ್, ಗ್ಲಾಸ್, ದೂರಸಂಪರ್ಕ ಹಾಗೂ ಏರೋಸ್ಪೇಸ್ ಉದ್ಯಮದಲ್ಲಿ ಇದನ್ನು ಬಳಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
.ಲಿಥಿಯಂ ಬ್ಯಾಟರಿ ತಂತ್ರಜ್ಞಾನ ಹಸ್ತಾಂತರ ಇಸ್ರೊ ನಿರ್ಧಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.