ವಿಜಯಪುರ: ‘ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಡೆದ ಹೋರಾಟದ ಬೆಳವಣಿಗೆಗೆ ಸಂಬಂಧಿಸಿದಂತೆ ವಿಳಂಬವಾದ್ರೂ ಸಚಿವ ಡಿ.ಕೆ.ಶಿವಕುಮಾರ್, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೀಡಿದ ತಪ್ಪೊಪ್ಪಿಗೆ ಹೇಳಿಕೆಗಳನ್ನು ಸ್ವಾಗತಿಸುತ್ತೇವೆ’ ಎಂದು ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.

‘ಮೊದಲ ಬಾರಿಗೆ ತಪ್ಪೊಪ್ಪಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಸ್ವಾಮೀಜಿ ಮಂಗಳವಾರ ನಗರದಲ್ಲಿ ನಡೆದ ಖಾಸಗಿ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಲಿಂಗಾಯತ ಧರ್ಮದ ಹೆಸರಿನಲ್ಲಿ, ತಮ್ಮ ಸ್ವಾರ್ಥಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದ ರಾಜಕೀಯ ನಾಯಕರಿಗೆ ಈಗಲೂ ಕಿವಿ ಮಾತೊಂದನ್ನು ಹೇಳುವೆವು. ಇನ್ನಾದರೂ ಒಟ್ಟಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿ’ ಎಂದು ಲಿಂಗಾಯತ ಚಳವಳಿಯ ಮುಂಚೂಣಿ ವಹಿಸಿಕೊಂಡಿದ್ದ ಮುಖಂಡರಿಗೆ ಸ್ವಾಮೀಜಿ ಪರೋಕ್ಷವಾಗಿ ಟಾಂಗ್ ನೀಡಿದರು.

‘ಸಮ್ಮಿಶ್ರ ಸರ್ಕಾರದಲ್ಲಿ ವೀರಶೈವ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಸಚಿವ ಸಂಪುಟ ವಿಸ್ತರಣೆ ಸಂದರ್ಭ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಸ್ವಾಮೀಜಿ ಇದೇ ಸಂದರ್ಭ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.