ಕನಕಪುರ: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಕಪುರದಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದರು.

ನಂತರ ಕೋಡಿಹಳ್ಳಿ ಪ್ಲಾಂಟೇಶನ್ನಲ್ಲಿರುವ ತೋಟದ ಮನೆಗೆ ಭೇಟಿಕೊಟ್ಟು ತಮ್ಮ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದು ಆರೋಗ್ಯ ವಿಚಾರಿಸಿ, ಕೆಲ ಕಾಲ ಅವರೊಟ್ಟಿಗೆ ಸಮಯ ಕಳೆದರು.

ಡಿ.ಕೆ.ಶಿವಕುಮಾರ್ ಅವರು ಕನಕಪುರಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತ ಮುಖಂಡರು ಪಟಾಕಿ ಸಿಡಿಸಿ ಘೋಷಣೆ ಕೂಗಿ ಅದ್ದೂರಿಯಾಗಿ ಸ್ವಾಗತಿಸಿದರು.

‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಜೈ’ ಎಂದು ಕಾರ್ಯಕರ್ತರು ಅಭಿಮಾನಿಗಳು ಘೋಷಣೆ ಕೂಗಿದರು. ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಶಿವಕುಮಾರ್ ಅವರಿಗೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದರು.

ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಸೇರಿದಂತೆ ಮೂರೂ ಕ್ಷೇತ್ರಗಳಲ್ಲಿ ಪಕ್ಷವು ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಸಂತಸ ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.