ಬೆಂಗಳೂರು: ಆಹಾರ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಜೊತೆಗೆ, ಪ್ರತಿ ತಿಂಗಳು ಒಂದೊಂದು ಪದಾರ್ಥಗಳನ್ನು ಪರೀಕ್ಷಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಗಸ್ಟ್‌ನಲ್ಲಿ ಬೇಕರಿ ತಿನಿಸುಗಳನ್ನು ವಿಶ್ಲೇಷಿಸಲು 211 ಪನ್ನೀರ್, 246 ಕೇಕ್, 67 ಕೋವಾದ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದರು.

‘ಆಹಾರ ಸುರಕ್ಷತಾ ಇಲಾಖೆಯಿಂದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಇದೇ ಶುಕ್ರವಾರ ಮತ್ತು ಶನಿವಾರ ರಾಜ್ಯದಾದ್ಯಂತ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್‌ಗಳನ್ನು ಆಂದೋಲನದ ರೂಪದಲ್ಲಿ ತಪಾಸಣೆ ನಡೆಸಲಾಗುವುದು. ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು’ ಎಂದು ಹೇಳಿದರು.

‘ಏಪ್ರಿಲ್ – ಜುಲೈವರೆಗೆ 8,418 ಸರ್ವೆ ಆಹಾರ ಮಾದರಿಗಳು ಮತ್ತು 2593 ಕಾನೂನಾತ್ಮಕ ಆಹಾರ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಜುಲೈ ತಿಂಗಳೊಂದರಲ್ಲೇ 2,753 ಸರ್ವೆ ಆಹಾರ ಮಾದರಿಗಳು ಮತ್ತು 711 ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಕಳಿಸಲಾಗಿದೆ. ಇದೇ ತಿಂಗಳಲ್ಲಿ 96 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ನೈರ್ಮಲ್ಯ ಕೊರತೆ ಕಂಡು ಬಂದ 132 ಆಹಾರ ಉದ್ದಿಮೆಗಳಿಗೆ ₹4.93 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಹಣ್ಣು, ತರಕಾರಿ ಪರೀಕ್ಷೆ: ‘ಬಿಬಿಎಂಪಿ ವ್ಯಾಪ್ತಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ 13 ಜಿಲ್ಲೆಗಳಿಂದ ಹಣ್ಣು ಮತ್ತು ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಿದ್ದು, 27 ಮಾದರಿಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಪ್ರಮಾಣದ ಕ್ರಿಮಿನಾಶಕಗಳು ಮತ್ತು ಶಿಲೀಂಧ್ರ ಪತ್ತೆಯಾಗಿದೆ’ ಎಂದು ತಿಳಿಸಿದರು.

ಶಿಕ್ಷೆ, ಪರವಾನಗಿ ಅಮಾನತು: ‘ಅಸುರಕ್ಷಿತ ಆಹಾರಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ 106 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿವೆ. 34 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. 18 ಪ್ರಕರಣಗಳಲ್ಲಿ ನ್ಯಾಯಾಲಯ ದಂಡವನ್ನು ವಿಧಿಸಿದೆ. ದೇವನಹಳ್ಳಿಯ ಕೆಎಫ್‌ಸಿ, ಬಿಬಿಎಂಪಿ ದಕ್ಷಿಣದಲ್ಲಿರುವ ನುಪ ಟೆಕ್ನಾಲಜೀಸ್, ಮಮತಾ ಏಜೆನ್ಸಿ ಮತ್ತು ಮೈಸೂರಿನ ವಿಶಾಲ್ ಬಾರ್ ಆ್ಯಂಡ್ ರೆಸ್ಟೊರೆಂಟ್‌ಗಳ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ’ ಎಂದು ಸಚಿವರು ಮಾಹಿತಿ ನೀಡಿದರು.

‘ಎಲ್ಲ ವರ್ಗದ ಆಹಾರ ತಯಾರಕರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಪರವಾನಗಿ ಪರಿಶೀಲನೆಗೆ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗುವುದು. ನೋಂದಣಿ, ಪರವಾನಿಗೆ ಪಡೆಯದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ಶೀಘ್ರ ಆಹಾರ ಪರೀಕ್ಷಾ ಕಿಟ್

ಜನರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನು ತಾವೇ ಪರೀಕ್ಷಿಸಿಕೊಳ್ಳುವುದಕ್ಕಾಗಿ ಹೊಟೆಲ್ ರೆಸ್ಟೊರೆಂಟ್ ಫುಡ್‌ಪಾರ್ಕ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿ 3400 ಪರೀಕ್ಷಾ ಕಿಟ್‌ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಒಂದು ಸಾವಿರ ಕಿಟ್‌ಗಳು ಬಂದಿದ್ದು ಶೀಘ್ರದಲ್ಲಿಯೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.