ಬೆಂಗಳೂರು: ‘ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಬ ಬಗ್ಗೆ ಆರೋಪಗಳಿದ್ದರೆ ಬಾಧಿತ ಖಾಸಗಿ ವ್ಯಕ್ತಿಗಳೂ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಲು ಅವಕಾಶವಿದೆ’ ಎಂದು ಹೈಕೋರ್ಟ್, ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ.

ಸಿವಿಲ್ ದಾವೆಯೊಂದಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿ ವಾಸಂತಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಪ್ರಕರಣವೇನು:ತೀರ್ಥಹಳ್ಳಿ ತಾಲ್ಲೂಕಿನ ಗಬಡಿ ಗ್ರಾಮದ ನಿವೇಶನಕ್ಕೆ ಸಂಬಂಧಿಸಿದಂತೆ ವಾಸಂತಿ ಅವರು 2015ರಲ್ಲಿ ವಿರುದ್ಧ ಅದೇ ಗ್ರಾಮದ ಜಿ.ಡಿ.ಉಮೇಶ್ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್ ದಾವೆ ದಾಖಲಿಸಿದ್ದರು.

‘ವಾಸಂತಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ’ ಎಂದು ಆರೋಪಿಸಿ ಉಮೇಶ್ ಪ್ರತ್ಯೇಕ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದ ಸ್ಥಳೀಯ ವಿಚಾರಣಾ ನ್ಯಾಯಾಲಯ, ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 420, 419, 423, 415, 417, 465, 471 ಮತ್ತು 468 ಅಡಿಯಲ್ಲಿ ಸಂಜ್ಞೇಯ ಅಪರಾಧ ದಾಖಲಿಸಿಕೊಂಡು ಸಮನ್ಸ್ ಜಾರಿಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ವಾಸಂತಿ, ‘ನಕಲಿ ದಾಖಲೆಗಳ ವಿಚಾರದಲ್ಲಿ ಕೋರ್ಟ್ಗಳು ಮಾತ್ರವೇ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬಹುದೇ ಹೊರತು ಖಾಸಗಿ ವ್ಯಕ್ತಿಗಳಲ್ಲ. ಈ ಪ್ರಕರಣದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಉಮೇಶ್ಗೆ ಅಧಿಕಾರ ಇಲ್ಲ’ ಎಂದು ಪ್ರತಿಪಾದಿಸಿದ್ದರು. ‘ಇಷ್ಟಕ್ಕೂ 2019ರಲ್ಲಿಯೇ ನಾನು ವಿಚಾರಣಾ ನ್ಯಾಯಾಲಯದಲ್ಲಿ ಹೂಡಿದ್ದ ದಾವೆ ವಾಪಸ್ ಪಡೆದಿದ್ದೇನೆ’ ಎಂದು ವಿವರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.