ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿಮಾಡಿದ ಕ್ರೈಸ್ತ ಸಮುದಾಯದ ಧಾರ್ಮಿಕ ಮುಖಂಡರು, ಕನಕಪುರ ತಾಲ್ಲೂಕು ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಅಡ್ಡಿಪಡಿಸದಂತೆ ಮನವಿ ಮಾಡಿದರು.

ಬೆಂಗಳೂರು ಧರ್ಮಕ್ಷೇತ್ರದ ಡಾ.ಪೀಟರ್ ಮಚಾವೊ ನೇತೃತ್ವದ ನಿಯೋಗ ಭೇಟಿಯಾಗಿತ್ತು. ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕೆಲಸ ಮುಂದುವರಿಸಲು ಅವಕಾಶ ಮಾಡಿಕೊಡುವಂತೆ ಅವರು ಕೇಳಿಕೊಂಡರು.

ಭೇಟಿ ಬಳಿಕ ಪೀಟರ್ ಮಚಾವೊ ಸುದ್ದಿಗಾರರೊಂದಿಗೆ ಮಾತನಾಡಿ, ‘ಯೇಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜಕೀಯ ಮಾಡಬಾರದು. ಸುಮಾರು ವರ್ಷಗಳಿಂದಲೂ ಕ್ರೈಸ್ತ ಸಮುದಾಯದವರು ಕಪಾಲಿ ಬೆಟ್ಟದಲ್ಲಿ ಯೇಸುವನ್ನು ಪೂಜಿಸಿಕೊಂಡು ಬಂದಿದ್ದಾರೆ. ಈಗ ಅದೇ ಜಾಗದಲ್ಲಿ ಯೇಸು ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ವಿರೋಧ ಮಾಡದಂತೆ ಮನವಿ ಮಾಡಿದ್ದೇವೆ’ ಎಂದರು.

‘ಕಪಾಲಿ ಬೆಟ್ಟದಲ್ಲಿ ಹಿಂದೂ ದೇವತೆಗಳನ್ನು ಪೂಜಿಸುತ್ತಿದ್ದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ನಾವು ಒಂದೂವರೆ ಲಕ್ಷ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದು, ಅದರಲ್ಲಿ ಒಬ್ಬರನ್ನಾದರೂ ಮತಾಂತರ ಮಾಡಿದ್ದರೆ ತೋರಿಸಲಿ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.