ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧದ ಎರಡು ಪ್ರಕರಣಗಳಲ್ಲಿ ನಗರದ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಹಲವು ವರ್ಷಗಳಿಂದ ತಲೆಮರೆಸಿಕೊಂಡು ಕಳೆದ ವರ್ಷವಷ್ಟೇ ಸೆನೆಗಲ್‌ನಲ್ಲಿ ಸೆರೆಸಿಕ್ಕಿದ್ದ ರವಿ ಪೂಜಾರಿಯನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು, ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.

ತಿಲಕನಗರ ಠಾಣೆ ವ್ಯಾಪ್ತಿಯಲ್ಲಿದ್ದ ಶಬನಂ ಡೆವಲಪರ್ಸ್ ಕಚೇರಿಯಲ್ಲಿ ನಡೆದಿದ್ದ ಜೋಡಿ ಕೊಲೆ ಹಾಗೂ ವೈಟ್‌ಪೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಕಿರುಕುಳ ನೀಡಿದ್ದ ಪ್ರಕರಣ ರವಿ ಪೂಜಾರಿ ಮೇಲಿತ್ತು. ಈ ಎರಡು ಪ್ರಕರಣದಲ್ಲಿ ಆತನ ವಿರುದ್ಧ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

'ಎರಡು ಪ್ರಕರಣದಲ್ಲಿ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಉಳಿದ ಪ್ರಕರಣಗಳ ತನಿಖೆ ಮುಂದುವರಿದಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.