ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರ ಗೆಲುವಿಗಾಗಿ ಹರಕೆ ಹೊತ್ತಿದ್ದ ಕನಕಪುರದ ಜೆಡಿಎಸ್ ಕಾರ್ಯಕರ್ತ ಯೂನಿಸ್ ಅಲಿಖಾನ್ ಅವರು, ಜೂನ್ 5ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ್ದಾರೆ. ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ದೊಡ್ಡಕೊಪ್ಪ ಗ್ರಾಮದ ಖಾನ್, ಅವರು ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ, ಅವರ ಗೆಲುವಿಗೆ ಹರಕೆ ಹೊತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.