ಬೆಂಗಳೂರು: ₹ 258 ಕೋಟಿ ವೆಚ್ಚದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರಾಜ್ಯದ ಎಲ್ಲ ಸ್ಥಿರಾಸ್ತಿಗಳ ಭೂಮಾಪನ (ಸರ್ವೆ) ನಡೆಸಲಾಗುತ್ತಿದೆ. ಒಂದು ವರ್ಷದೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಿ ಡಿಜಿಟಲ್ ವ್ಯವಸ್ಥೆಯಡಿ ಆಸ್ತಿಗಳ ನಕ್ಷೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ರಾಮನಗರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರಾಯೋಗಿ
ಕವಾಗಿ ಯೋಜನೆ ಜಾರಿಗೊಳಿಸಿದ್ದು, ಡ್ರೋನ್ ಕ್ಯಾಮೆರಾಗಳ ಮೂಲಕ ಸ್ಥಿರಾಸ್ತಿಗಳ ಭೂಮಾಪನ ಆರಂಭವಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ₹ 258 ಕೋಟಿ ಅನುದಾನ ಒದಗಿಸಲಾಗಿದೆ’ ಎಂದರು.

ಡ್ರೋನ್ ಮೂಲಕ ಆಸ್ತಿಗಳ ಭೂಮಾಪನ ನಡೆಸಲು ಪ್ರತಿ ಜಿಲ್ಲೆಗೂ ಪ್ರತ್ಯೇಕವಾಗಿ ಗುತ್ತಿಗೆ ನೀಡಲಾಗುವುದು. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ತಿಗಳೆಲ್ಲವನ್ನೂ ಭೂಮಾಪನ ನಡೆಸಿ, ನಕ್ಷೆಗಳನ್ನು ಸಿದ್ಧಪಡಿಸಲಾಗುವುದು. ಅವುಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿಡಲಾಗುವುದು ಎಂದು ವಿವರಿಸಿದರು.

ಭೂ ದಾಖಲೆಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯ. ಅದಕ್ಕೆ ಪುರಕವಾಗಿ ಈ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ಭೂ ದಾಖಲೆಗಳನ್ನು ಸಿದ್ಧಪಡಿಸುವುದು ಮತ್ತು ವಿತರಣೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಇದು ಸಹಕಾರಿಯಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.