ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದ ಆರೋಪಿ ನಟಿ ಸಂಜನಾ ಗಿಲ್ರಾನಿ ಅವರಿಗೆ ವೈದ್ಯಕೀಯ ಪ್ರಮಾಣ ಪತ್ರ ಆಧರಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸಂಜನಾ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೊಸದಾಗಿ ಅರ್ಜಿ ಸಲ್ಲಿಸಿದ ಸಂಜನಾ, ವೈದ್ಯಕೀಯ ಕಾರಣಗಳನ್ನು ನೀಡಿದ್ದರು. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ಪೀಠ ಸೂಚನೆ ನೀಡಿತ್ತು. ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂಬ ವರದಿ ಆಧರಿಸಿ ಜಾಮೀನು ಮಂಜೂರು ಮಾಡಿದೆ.₹3 ಲಕ್ಷ ಮೌಲ್ಯದ ಭದ್ರತಾ ಠೇವಣಿ ಮತ್ತು ಇಬ್ಬರ ಜಾಮೀನು ಪಡೆದು ಸಂಜನಾ ಬಿಡುಗಡೆ ಮಾಡುವಂತೆ ಕಾರಾಗೃಹದ ಅಧಿಕಾರಿಗಳಿಗೆ ನ್ಯಾಯ ಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಆದೇಶಿಸಿದರು.

ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸಂಜನಾ ಅವರನ್ನು ಸೆಪ್ಟೆಂಬರ್ನಲ್ಲಿ ಬಂಧಿಸಲಾಗಿತ್ತು. ಸೆಪ್ಟೆಂಬರ್ 29ರಂದು ವಿಚಾರಣಾ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿ ಸಿತ್ತು. ನ.3ರಂದು ಹೈಕೋರ್ಟ್ ಕೂಡ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.