ಚಿತ್ರದುರ್ಗ: ಮದ್ಯ ಸೇವಿಸಿ ದ್ವಿಚಕ್ರ ವಾಹನ ಚಾಲನೆ ಮಾಡಿ ₹ 10,250 ದಂಡ ಪಾವತಿಸಲು ಸಾಧ್ಯವಾಗದ ಸವಾರನಿಗೆ ಒಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಿ ಸಿಜೆಎಂ ನ್ಯಾಯಾಲಯ ಮಂಗಳವಾರ ಶಿಕ್ಷೆ ವಿಧಿಸಿದೆ.

ಚಿತ್ರದುರ್ಗ ನಗರದ ಸಂಪಿಗೆ ಸಿದ್ಧೇಶ್ವರ ಶಾಲೆಯ ಹಿಂಭಾಗದ ಬಡಾವಣೆಯ ನಿವಾಸಿ ಟಿ.ರವಿಕುಮಾರ್ ಜೈಲು ಸೇರಿದ ಬೈಕ್ ಸವಾರ.

ವೃತ್ತಿಯಲ್ಲಿ ಹಮಾಲಿಯಾಗಿರುವ ರವಿಕುಮಾರ್, ಸಂಚಾರ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಫೆ.2ರಂದು ಮೆದೇಹಳ್ಳಿ ರಸ್ತೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಕುಡಿದು ವಾಹನ ಚಾಲನೆ ಮಾಡಿದ್ದಕ್ಕೆ ₹ 10 ಸಾವಿರ, ಅಪಾಯಕಾರಿ ಚಾಲನೆಗೆ ₹ 10 ಸಾವಿರ ಹಾಗೂ ಹೆಲ್ಮೆಟ್ ಧರಿಸದೇ ಇರುವುದಕ್ಕೆ ₹ 500 ದಂಡ ವಿಧಿಸುತ್ತಾರೆ. ನ್ಯಾಯಾಲಯಕ್ಕೆ ಹಾಜರಾಗಿ ದಂಡ ಪಾವತಿಸುವಂತೆ ಪೊಲೀಸರು ತಾಕೀತು ಮಾಡುತ್ತಾರೆ.

ಸಿಜೆಎಂ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದ ರವಿಕುಮಾರ್‌ಗೆ ದಂಡದ ಮೊತ್ತದಲ್ಲಿ ಶೇ 50ರಷ್ಟು ವಿನಾಯಿತಿ ನೀಡಿದ ನ್ಯಾಯಾಧೀಶ ಕೆಂಪರಾಜು, ₹ 10,250 ಪಾವತಿಸುವಂತೆ ಸೂಚಿಸುತ್ತಾರೆ. ತನ್ನ ಬಳಿ ₹ 2 ಸಾವಿರ ಮಾತ್ರ ಇದೆ, ಉಳಿದ ದಂಡ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಕೋರಿಕೊಳ್ಳುತ್ತಾರೆ. ದಂಡ ಪಾವತಿಸಲು ಸಾಧ್ಯವಾಗದ ಸವಾರನಿಗೆ ಶಿಕ್ಷೆ ವಿಧಿಸಿ ನ್ಯಾಯಾಧೀಶರು ಆದೇಶಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.