ಬೆಂಗಳೂರು: ‘ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಪಕ್ಷವನ್ನು ಕಟ್ಟುವಲ್ಲಿ ನಾವು ವಿಫಲರಾಗಿದ್ದೇವೆ. ಪಕ್ಷದ ಕೆಲವು ನಾಯಕರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿರುವುದೂ ನಮ್ಮ ವೈಫಲ್ಯ’ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

‘ಪಕ್ಷವನ್ನು ಬಿಟ್ಟು ಹೋಗುತ್ತಿರುವವರನ್ನು ಮನವೊಲಿಸಿ ಉಳಿಸಿಕೊಳ್ಳುವ ಪ್ರಯತ್ನವೂ ನಡೆಯುತ್ತಿಲ್ಲ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಚುನಾವಣೆ ಬಳಿಕ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷವನ್ನು ಕಟ್ಟುವ ಕೆಲಸ ಆಗಿಲ್ಲ. ಇದು ನಿಜಕ್ಕೂ ಬೇಸರದ ಸಂಗತಿ’ ಎಂದರು.

‘ರಾಜ್ಯ ಸರ್ಕಾರ ಎನ್ಇಪಿ ರದ್ದು ಮಾಡಿ ಎಸ್ಇಪಿ (ರಾಜ್ಯ ಶಿಕ್ಷಣ ನೀತಿ) ತರಲು ಹೊರಟಿರುವ ನಿರ್ಧಾರ ಶಿಕ್ಷಣ ವಲಯಕ್ಕೆ ಅಪಾಯಕಾರಿ. ಇದಕ್ಕಾಗಿ ಸರ್ಕಾರ ಆಯೋಗ ರಚನೆ ಮಾಡಿರುವ ಕ್ರಮ ಸರಿಯಲ್ಲ. ಎನ್ಇಪಿ ಸಮಗ್ರವಾಗಿ ಅಧ್ಯಯನ ನಡೆಸಿ ಮಾಡಿದ ನೀತಿಯಾಗಿತ್ತು. ಈಗ ತಮ್ಮ ಕಾರ್ಯಸೂಚಿಗೆ ತಕ್ಕಂತೆ ವರದಿ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಇದು ಶಿಕ್ಷಣ ವ್ಯವಸ್ಥೆಗೆ ಮಾರಕ’ ಎಂದು ಆತಂಕ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರ ಬರ ನಿರ್ವಹಣೆ ಮಾಡುವಲ್ಲಿ ಎಡವಿದೆ. ಕಾವೇರಿ ವಿಚಾರದಲ್ಲೂ ರಾಜ್ಯ ಸರ್ಕಾರ ತನ್ನ ವಾದವನ್ನು ಸರಿಯಾಗಿ ಮಂಡಿಸಿಲ್ಲ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ನೀರಿನ ಕೊರತೆ ಇರುವುದು ಮತ್ತು ತಮಿಳುನಾಡು ಹೆಚ್ಚುವರಿ ಪ್ರದೇಶದಲ್ಲಿ ಬೆಳೆದಿರುವುದನ್ನು ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.