ಬೆಂಗಳೂರು: ‘ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಒಳ್ಳೆಯದು’ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು,‘ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ’ ಎಂದು ಪ್ರತಿಪಾದಿಸಿದರು.

‘ಪ್ರಸ್ತುತ ಕೋವಿಡ್ ಪ್ರಸರಣ ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ’ ಎಂದರು.

‘ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸಲಹಾತ್ಮಕವಾಗಿ ಹೇಳಿದೆ.

ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದ್ದು, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆ ಆಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನ:ಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಿ, ಒಟ್ಟಾರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

‘ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ.

ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹೀಗಾಗಿ ನೀಟ್, ಜೆಇಇ, ಸಿಇಟಿ, ಐಸಿಎಆರ್ ಅಂಥ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳ ಸೂಕ್ತ ದಿನಾಂಕಗಳಂದು ಆಯೋಜಿಸಬಹುದು’ ಎಂದು ಸುರೇಶ್ ಕುಮಾರ್ ಸಲಹೆ ನೀಡಿದರು.

18–44 ವರ್ಷ ವಯಸ್ಸಿನವರಿಗೆ ಸದ್ಯಕ್ಕಿಲ್ಲ ಕೋವಿಡ್ ಲಸಿಕೆ

ಸಭೆಯಲ್ಲಿ ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು. ಸಿಬಿಎಸ್‌ಇ ಮಂಡಳಿಯು ಸೇರಿದಂತೆ ಬಹುತೇಕ ರಾಜ್ಯಗಳು ಪರೀಕ್ಷೆ ನಡೆಸುವ ಪರವಾಗಿ ವಿಚಾರ ಮಂಡಿಸಿದರು. ಬಹುಪಾಲು ಸಚಿವರು ಪರೀಕ್ಷೆಗಳನ್ನು ನಡೆಸಲೇಬೇಕು ಎಂದು ಪ್ರತಿಪಾದಿಸಿದರು.

Covid-19 India Update: 2.40 ಲಕ್ಷ ಹೊಸ ಪ್ರಕರಣ, 3,741 ಮಂದಿ ಸಾವು

ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.